Saturday, June 27, 2026
spot_imgspot_img
spot_imgspot_img

ಮೈಸೂರು:ಪಂಚಭೂತಗಳಲ್ಲಿ ಲೀನರಾದ ಎಸ್.ಎಲ್ ಬೈರಪ್ಪ

- Advertisement -
- Advertisement -

ಪದ್ಮಶ್ರೀ, ಪದ್ಮವಿಭೂಷಣ ಪುರಸ್ಕೃತ ಕನ್ನಡದ ಖ್ಯಾತ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರು, ಇಂದು ಪಂಚಭೂತಗಳಲ್ಲಿ ಲೀನವಾದರು. ಮೈಸೂರು ಬೆಟ್ಟದ ತಪ್ಪಲಿನಲ್ಲಿರುವ ಚಿರಶಾಂತಿಧಾಮದಲ್ಲಿ ಹೊಯ್ಸಳ ಕರ್ನಾಟಕ ಬ್ರಾಹ್ಮಣ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನೆರವೇರಿತು.ಇಬ್ಬರು ಪುತ್ರರಾದ ರವಿ ಶಂಕರ್ ಹಾಗು ಉದಯ್ ಶಂಕರ್ ಅಂತಿಮ ವಿಧಿ ವಿಧಾನದ ಬಳಿಕ ಅಂತ್ಯಕ್ರಿಯೆ ನೆರವೇರಿಸಿದರು. ಪುತ್ರಿ ಸಹನಾ ವಿಜಯಕುಮಾರ್, ಸಚಿವರಾದ ಡಾ.ಎಚ್ ಸಿ ಮಹದೇವಪ್ಪ. ವೆಂಕಟೇಶ್. ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದಾರೆ.

ನಿನ್ನೆ ಎಸ್.ಎಲ್. ಭೈರಪ್ಪ ಅವರ ಪಾರ್ಥಿವ ಶರೀರವನ್ನು ಮೈಸೂರಿಗೆ ತರಲಾಗಿದ್ದು, ಮೈಸೂರಿನ ಕಲಾಮಂದಿರದ ಬಳಿಯ ಕಿಂದರಿ ಜೋಗಿ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಂತರ ಜೆಎಸ್‌ಎಸ್ ಆಸ್ಪತ್ರೆಗೆ ಪಾರ್ಥಿವ ಶರೀರ ರವಾನಿಸಲಾಗಿತ್ತು. ಇಂದು ಬೆಳಗ್ಗೆ 8:30 ಕ್ಕೆ ಭೈರಪ್ಪ ಅವರ ಮನೆಯಲ್ಲಿ ಅಂತಿಮ ವಿಧಿ ವಿಧಾನ ನಡೆಸಿ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.

- Advertisement -

Related news

error: Content is protected !!