





ಮೈಸೂರು: ಪಬ್ ಒಂದರಲ್ಲಿ ಎರಡು ಗುಂಪುಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಒಬ್ಬನ ಸಾವಿನಲ್ಲಿ ಅಂತ್ಯ ಕಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಗೋಕುಲಂ ನಿವಾಸಿ, ನಿಶಾಂತ್ (32) ಗಲಾಟೆಯಲ್ಲಿ ಮೃತಪಟ್ಟ ಯುವಕ. ಆತ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಎಂಬುದು ತಿಳಿದುಬಂದಿದೆ.
ನಿಶಾಂತ್ ಪಬ್‌ನಲ್ಲಿ ಪಾರ್ಟಿ ಮುಗಿಸಿ ತನ್ನ ಗೆಳೆಯರಾದ ಸಂದೀಪ್ ಮತ್ತು ದೀಕ್ಷಿತ್ ಜತೆ ಹೊರಬರುತ್ತಿದ್ದಾಗ, ರಾಕಿ ಮತ್ತು ಆತನ ಸ್ನೇಹಿತರು ಎದುರಾಗಿದ್ದರು. ಆ ವೇಳೆ ಎರಡು ಗುಂಪುಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ಮಾತಿನ ಚಕಮಕಿ, ತಳ್ಳಾಟ, ನೂಕಾಟ ನಡೆದಿದೆ ಎನ್ನಲಾಗಿದ್ದು, ಗಲಾಟೆಯ ಮಧ್ಯೆ ನಿಶಾಂತ್ ಪಬ್‌ನ ಎರಡನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾನೆ.
ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ನಿಶಾಂತ್‌ನ್ನು ಉದ್ದೇಶಪೂರ್ವಕವಾಗಿ ಮಹಡಿಯಿಂದ ತಳ್ಳಿಹಾಕಿ ಕೊಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ ಎಂದು ವರದಿಯಿಂದ ತಿಳಿದುಬಂದಿದೆ..








