Thursday, April 25, 2024
spot_imgspot_img
spot_imgspot_img

ಸರಳ ಜಂಬೂ ಸವಾರಿ-ರಾಜಗಾಂಭೀರ್ಯದಿಂದ ಹೆಜ್ಜೆ ಹಾಕಿದ ಅಭಿಮನ್ಯು

- Advertisement -G L Acharya panikkar
- Advertisement -

ಮೈಸೂರು(ಅ.26): ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿಶ್ವವಿಖ್ಯಾತ ಮೈಸೂರು ಜಂಬೂಸವಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೋಮವಾರ ಚಾಲನೆ ನೀಡಿದರು.750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ನಾಡದೇವತೆ ಚಾಮುಂಡೇಶ್ವರಿಯನ್ನು ಹೊತ್ತು ಕ್ಯಾಪ್ಟನ್ ಅಭಿಮನ್ಯು ರಾಜಗಾಂಭೀರ್ಯದಿಂದ ಹೆಜ್ಜೆ ಹಾಕಿದಾಗ ಅಲ್ಲಿದ್ದ ಜನರು ಪುಳಕಗೊಂಡರು.

ಮೊದಲ ಬಾರಿ ಅಂಬಾರಿ ಹೊತ್ತ ಅಭಿಮನ್ಯು. ಅಂಬಾರಿ ವೇದಿಕೆ ಬಳಿ ಬಂದಾಗ ಚಾಮುಂಡೇಶ್ವರಿಗೆ ಸಿಎಂ ಯಡಿಯೂರಪ್ಪ ಪುಷ್ಪಾರ್ಚನೆ ಮಾಡಿದರು. ಅಭಿಮನ್ಯುಗೆ ವಿಜಯ ಮತ್ತು ಕಾವೇರಿ ಆನೆಗಳು ಸಾಥ್ ನೀಡಿವೆ.ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಮೈಸೂರು ಮಹಾನಗರ ಪಾಲಿಕೆ ಮೇಯರ್ ತಸ್ನೀಂ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ನಗರ ಪೊಲೀಸ್ ಆಯುಕ್ತ ಚಂದ್ರಗುಪ್ತ ವೇದಿಕೆಯಲ್ಲಿ ಉಪಸ್ಠಿತರಿದ್ದರು.ಕೊರೋನಾ ಸೋಂಕಿನ ಸಂಕಷ್ಟದ ನಡುವೆಯೂ ಮೈಸೂರು ದಸರಾ -2020 ಸರಳವಾಗಿ ಆಚರಿಸಲಾಯಿತು.

- Advertisement -

Related news

error: Content is protected !!