Friday, April 19, 2024
spot_imgspot_img
spot_imgspot_img

ಮೈಸೂರು ದಸರಾವನ್ನು ಉದ್ಘಾಟಿಸಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು; ಸಿಎಂ ಬೊಮ್ಮಾಯಿ

- Advertisement -G L Acharya panikkar
- Advertisement -
astr

ಕಳೆದ ಎರಡು ವರ್ಷಗಳಿಂದ ಕಳೆಗುಂದಿದ ನಾಡ ಹಬ್ಬ ದಸರಾ ಈ ಬಾರಿ ಸಂಭ್ರಮ, ವೈಭವದಿಂದ ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಬಾರಿಯ ಮೈಸೂರು ದಸರಾ ಕಾರ್ಯಕ್ರಮವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟಿಸಲಿದ್ದಾರೆ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ದಸರಾ ಮಹೋತ್ಸವವನ್ನು ಯಾರು ಉದ್ಘಾಟಿಸಬೇಕು ಎಂಬುದಾಗಿ ಚರ್ಚಿಸಲಾಗಿತ್ತು. ಆ ಚರ್ಚೆಯಂತೆ ಈ ಬಾರಿ ಮೈಸೂರು ದಸರಾವನ್ನು ರಾಷ್ಟ್ರಪತಿ ದ್ರೌಪತಿ ಮುರ್ಮು ಉದ್ಘಾಟಿಸಲು ಆಹ್ವಾನಿಸಲು ನಿರ್ಧರಿಸಲಾಗಿದೆ. ಹೀಗಾಗಿ ಈ ಬಾರಿಯ ಮೈಸೂರು ದಸರಾವನ್ನು ದ್ರೌಪದಿ ಮುರ್ಮು ಅವರು ಉದ್ಘಾಟಿಸಲಿದ್ದಾರೆ ಎಂದರು.

- Advertisement -

Related news

error: Content is protected !!