Sunday, June 7, 2026
spot_imgspot_img
spot_imgspot_img

ಮೈಸೂರು: ವಾಹನ ತಪಾಸಣೆ ವೇಳೆ ಚುನಾವಣಾ ಸಿಬ್ಬಂದಿ ಮೇಲೆ ಹಲ್ಲೆ..!

- Advertisement -
- Advertisement -

ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ನೀತಿ ಸಂಹಿತೆ ಜಾರಿಯಾದ ಹಿನ್ನೆಲೆ ಎಲ್ಲ ವಾಹನಗಳನ್ನು ಪರಿಶೀಲಿಸಲಾಗುತ್ತಿದೆ. ಅದರಂತೆ ವಾಹನ ತಪಾಸಣೆ ವೇಳೆ ಚುನಾವಣಾ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.

ಹಲ್ಲೆಗೊಳಗಾದ ವ್ಯಕ್ತಿ ಸಿಬ್ಬಂದಿಯನ್ನು ಸಂತೋಷ್ ಎಂದು ಗುರುತಿಸಲಾಗಿದೆ.

ಮೈಸೂರು ಜಿಲ್ಲೆಯ ಕೆ. ಆರ್. ನಗರ ತಾಲೂಕಿನ ತಿದ್ದೂರಿನಲ್ಲಿ ಈ ಘಟನೆ ನಡೆದಿದೆ. ಅಕ್ರಮ ಮದ್ಯ ಸಾಗಾಣಿಕೆ ತಡೆಗೆ ಇಲಾಖೆ ತಪಾಸಣೆ ನಡೆಸಲಾಗುತ್ತಿತ್ತು. ಈ ವೇಳೆ ಬಂದ ಬೈಕೊಂದನ್ನು ತಡೆದು ತಪಾಸಣೆಗೆ ಮುಂದಾದ ಪೊಲೀಸ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

- Advertisement -

Related news

error: Content is protected !!