Friday, March 29, 2024
spot_imgspot_img
spot_imgspot_img

ದಸರಾ ಗಜಪಯಣಕ್ಕೆ ಚಾಲನೆ

- Advertisement -G L Acharya panikkar
- Advertisement -

ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವದ ಗಜಯಾನ ಆರಂಭಕ್ಕೆ ಗುರುವಾರ ಹುಣಸೂರಿನ ವೀರನಹೊಸಹಳ್ಳಿಯಲ್ಲಿಯ ನಾಗರಹೊಳೆ ರಾಷ್ಟ್ರಿಯ ಉದ್ಯಾನವನದ ಗೇಟ್‌ನಿಂದ ಚಾಲನೆ ನೀಡಲಾಯಿತು.

ಸಂಪ್ರದಾಯದಂತೆ ತುಲಾ ಲಗ್ನದಲ್ಲಿ ಬೆಳಿಗ್ಗೆ 10.10 ರಿಂದ 11 ಗಂಟೆಯ ಸಮಯದಲ್ಲಿ ವೀರನಹೊಸಹಳ್ಳಿಯ ಆಂಜನೇಯ ದೇವಸ್ಥಾನದಲ್ಲಿ ಅಭಿಮನ್ಯು ನೇತೃತ್ವದ ಗಜಪಡೆಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಪುಷ್ಪಾರ್ಚನೆ ಸಲ್ಲಿಸಿದರು.

ಕೋವಿಡ್ ಹಿನ್ನೆಲೆ ಈ ಬಾರಿಯ ನಾಡಹಬ್ಬ ದಸರಾದಲ್ಲಿ ಅಂಬಾರಿ ಸಾರಥಿ ಅಭಿಮನ್ಯು(54), ವಿಜಯ(61), ಕಾವೇರಿ(42), ಗೋಪಿ(38) ಹಾಗೂ ವಿಕ್ರಮ(47) ಸೇರಿದಂತೆ ಐದು ಆನೆಗಳು ಮಾತ್ರ ಭಾಗವಹಿಸಲಿವೆ.ಈ ವೇಳೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಮಾತನಾಡಿ, ಕೋವಿಡ್ ಹಿನ್ನೆಲೆ ಈ ಬಾರಿ ದಸರೆಯನ್ನು ಸರಳವಾಗಿ ಆಚರಿಸಲಾಗುತ್ತಿದೆ. ಪ್ರತಿ ಬಾರಿ ಸಂಪ್ರದಾಯದಂತೆ ದಸರಾ ಜಂಬೂಸವಾರಿಯಲ್ಲಿ ಭಾಗವಹಿಸಲಿರುವ ಗಜಪಯಣಕ್ಕೆ ಚಾಲನೆ ನೀಡಲಾಗಿದೆ ಎಂದರು.

ದಸರಾ ಆಚರಣೆಯನ್ನು ಬಹಳ ಎಚ್ಚರಿಕೆಯಿಂದ ಸುರಕ್ಷಿತವಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಸರ್ಕಾರದ ಮಾರ್ಗಸೂಚಿಯಂತೆ ಹೆಚ್ಚು ಜನಸಂದಣಿ ಉಂಟಾಗದಂತೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಜಿಲ್ಲಾ ಪಂಚಾಯತ್ ಸಿಇಒ ಡಿ.ಭಾರತಿ, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜಗತ್ ರಾಮ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಟಿ.ಹೀರಾಲಾಲ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಸಿ.ಅಲೆಗ್ಸಾಂಡರ್, ಮಹೇಶ್‌ಕುಮಾರ್, ಡಾ.ಕೆ.ಸಿ.ಪ್ರಶಾಂತ್ ಕುಮಾರ್, ಅರಣ್ಯ ಸಂರಕ್ಷಣಾಧಿಕಾರಿ ನಟೇಶ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಪಿ.ಮಹದೇವ್, ಅಂಟೋನಿ ಪೌಲ್ ಇನ್ನಿತರರು ಉಪಸ್ಥಿತರಿದ್ದರು.

- Advertisement -

Related news

error: Content is protected !!