Thursday, May 9, 2024
spot_imgspot_img
spot_imgspot_img

ಮಾನಸಿಕ ಅಸ್ವಸ್ಥ ಮಹಿಳೆ ಮೇಲೆ ಅತ್ಯಾಚಾರ!

- Advertisement -G L Acharya panikkar
- Advertisement -

ಮೈಸೂರು: ವ್ಯಕ್ತಿಯೋರ್ವ ಬುದ್ಧಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಕೆ.ಆರ್.ಆಸ್ಪತ್ರೆಯಲ್ಲಿ ನಡೆದಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

30 ವರ್ಷ ವಯಸ್ಸಿನ ವ್ಯಕ್ತಿಯೋರ್ವ ರಾತ್ರಿ ವೇಳೆ ಕಿಟಕಿಯ ಗ್ರಿಲ್ ಮುರಿದು ಆಸ್ಪತ್ರೆಯ ಒಳಗೆ ನುಗ್ಗಿ ಬುದ್ಧಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ್ದು, ಈ ಬಗ್ಗೆ ಸಂತ್ರಸ್ತ ಮಹಿಳೆಯ ಸಂಬಂಧಿಕರು ಮಾಹಿತಿ ನೀಡಿದರೂ ವೈದ್ಯರು ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

ಈ ಪ್ರಕರಣವನ್ನು ಕೆ.ಆರ್.ಆಸ್ಪತ್ರೆಯ ವೈದ್ಯರು ಮುಚ್ಚಿ ಹಾಕಲು ಯತ್ನಿಸುತ್ತಿದ್ದಾರೆ ಎನ್ನುವ ಆರೋಪವನ್ನು ಮಹಿಳೆಯ ಸಂಬಂಧಿಕರು ಮಾಡಿದ್ದಾರೆ. ಮಾನವ ಹಕ್ಕುಗಳ ಸೇವಾ ಸಮಿತಿಯಿಂದ ಈ ಪ್ರಕರಣ ಬೆಳಕಿಗೆ ಬಂದಿದೆ. ಅತ್ಯಾಚಾರದ ಬಗ್ಗೆ ವಾರದ ಹಿಂದೆಯೇ ವೈದ್ಯರಿಗೆ ಮಾಹಿತಿ ನೀಡಿದರು. ಮಾಹಿತಿ ನೀಡಿದ ಮಹಿಳೆಗೆ ಹಲ್ಲೆ ಮಾಡಿ, ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಮಾನವ ಹಕ್ಕುಗಳ ಸೇವಾ ಸಮಿತಿ ನೀಡಿದ ಮಾಹಿತಿಯ ಹಿನ್ನೆಲೆಯಲ್ಲಿ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ ಎಂದು ಹೇಳಲಾಗಿದೆ. ಇನ್ನೂ ವಿಚಾರ ಬಹಿರಂಗವಾಗುತ್ತಿದ್ದಂತೆಯೇ ಆಸ್ಪತ್ರೆಯ ಭದ್ರತಾ ಸಿಬ್ಬಂದಿ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.

driving
- Advertisement -

Related news

error: Content is protected !!