Thursday, June 18, 2026
spot_imgspot_img
spot_imgspot_img

ಸಾರ್ವಜನಿಕರಿಗೆ ಮೈಸೂರು ಅರಮನೆ ಪ್ರವೇಶ ನಿರ್ಬಂಧ: ಯಾವಾಗ? ಇಲ್ಲಿದೆ ವಿವರ

- Advertisement -
- Advertisement -

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ರಾಜಮನೆತನದವರಿಂದ ಅರಮನೆಯಲ್ಲಿ ಧಾರ್ಮಿಕ ಪೂಜಾ ಕೈಂಕರ್ಯ ನಡೆಯಲಿರುವ ಹಿನ್ನೆಲೆ ನವರಾತ್ರಿಯ ದಿನಗಳಲ್ಲಿ ಸಾರ್ವಜನಿಕರು, ಪ್ರವಾಸಿಗರಿಗೆ ಅರಮನೆ ಪ್ರವೇಶ ನಿರ್ಬಂಧ ವಿಧಿಸಲಾಗಿದೆ.

ಈ ಬಗ್ಗೆ ಮೈಸೂರು ಅರಮನೆ ಆಡಳಿತ ವತಿಯಿಂದ ಪ್ರಕಟಣೆ‌ ಹೊರಡಿಸಲಾಗಿದ್ದು, ರಾಜವಂಶಸ್ಥರಿಂದ ಅರಮನೆಯಲ್ಲಿ ಸೆಪ್ಟೆಂಬರ್ 27ರಿಂದ ಅಕ್ಟೊಬರ್ 27ರವರೆಗೆ ನಡೆಯಲಿರುವ ಖಾಸಗಿ ಕಾರ್ಯಕ್ರಮ ನಡೆಯಲಿವೆ. ಸೆ.27ರಂದು ಸಿಂಹಾಸನ ಜೋಡಣೆ ಹಿನ್ನೆಲೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ, ಅ.3ರಂದು ಯದುವೀರ್ ಒಡೆಯರ್ ಖಾಸಗಿ ದರ್ಬಾರ್ ಹಿನ್ನೆಲೆ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ಇರುತ್ತದೆ.

ಅ.11 ಮತ್ತು 12ರಂದು ಆಯುಧಪೂಜೆ, ವಿಜಯದಶಮಿ ಹಿನ್ನೆಲೆ ಕೂಡ ಎರಡು ದಿನ ಪ್ರವಾಸಿಗರಿಗೆ ಅರಮನೆಗೆ ಪ್ರವೇಶ ನಿರ್ಬಂಧಿಸಲಾಗಿದ್ದು, ಅ.27ರಂದು ಸಿಂಹಾಸನ ವಿಸರ್ಜನೆ ಪ್ರಯುಕ್ತ ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಸಹ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

- Advertisement -

Related news

error: Content is protected !!