Thursday, May 16, 2024
spot_imgspot_img
spot_imgspot_img

ಅಧಿಕಾರಿಗಳನ್ನು ವರ್ಗಾವಣೆ ಮಾಡುವುದೇ ತಾಕತ್ತಾದರೆ ಅಂತಹ ತಾಕತ್ತು ನನಗೆ ಬೇಡ; ಪ್ರತಾಪ್ ಸಿಂಹ ಪ್ರತಿಕ್ರಿಯೆ!

- Advertisement -G L Acharya panikkar
- Advertisement -

ಮೈಸೂರು: ಅಧಿಕಾರಿಗಳನ್ನು ವರ್ಗಾವಣೆ ಮಾಡುವುದೇ ತಾಕತ್ತಾದರೆ ಅಂತಹ ತಾಕತ್ತು ನನಗೆ ಬೇಡ ಎಂದು ಶಾಸಕ ಜಿಟಿ.ದೇವೇಗೌಡರಿಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.

ನಿನಗೆ ತಾಕತ್ತಿದ್ದರೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯವರನ್ನು ವರ್ಗಾವಣೆ ಮಾಡಿಸು ಎಂದು ಜಿಟಿ ದೇವೇಗೌಡರು ಸವಾಲು ಹಾಕಿದ್ದರು. ಇದಕ್ಕೆ ಉತ್ತರಿಸಿದ ಪ್ರತಾಪ್ ಸಿಂಹ, ಒಬ್ಬ ಸಂಸದನಾಗಿ ನಾನು ನನ್ನ ಕೆಲಸದಲ್ಲಿ ತಾಕತ್ತು ತೋರಿಸಿದ್ದೆನೆ ಎಂದರು.

ಮೈಸೂರಿಗೆ ನಾನು ಹೊರಗಿನವನು. ಆದರೂ ಮೊದಲ ಚುನಾವಣೆಯಲ್ಲಿ ಮೈಸೂರು- ಕೊಡಗಿನ ಜನ ಮೂವತ್ತು ಸಾವಿರ ಅಂತರದ ಮತಗಳಿಂದ ಗೆಲ್ಲಿಸಿದ್ದರು. ನನ್ನ ತಾಕತ್ತು ತೋರಿಸಿ ಒಳ್ಳೆಯ ಕೆಲಸ ಮಾಡಿದ್ದರಿಂದಾಗಿ, ಎರಡನೇ ಚುನಾವಣೆಯಲ್ಲಿ ಒಂದು ಲಕ್ಷದ ನಲವತ್ತು ಸಾವಿರ ಮತಗಳಿಂದ ಗೆಲ್ಲಿಸಿದ್ದರು. ಇದಕ್ಕಿಂತಲೂ ನಾನು ಯಾವ ತಾಕತ್ತು ತೋರಿಸಬೇಕು ಎಂದರು.

ಜಿಲ್ಲಾಧಿಕಾರಿ ಅಥವಾ ಇನ್ಯಾವುದೋ ಅಧಿಕಾರಿಯನ್ನು ವರ್ಗಾವಣೆ ಮಾಡಿಸುದು ರಾಜಕಾರಣಿಗಳಿಗೆ ಸಾಮಾನ್ಯ ವಿಚಾರ. ನನ್ನ ದೃಷ್ಟಿಯಲ್ಲಿ ಅದು ಅತ್ಯಂತ ಸಣ್ಣ ಕೆಲಸ. ಅಂತಹ ಸಣ್ಣ ಕೆಲಸವನ್ನ ನಾನು ಮಾಡುವುದಿಲ್ಲ. ಸರ್ಕಾರ ಕೊಟ್ಟ ಅಧಿಕಾರಿಗಳ ಜೊತೆಗೆ ಕೆಲಸ ಮಾಡುತ್ತೆನೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

driving
- Advertisement -

Related news

error: Content is protected !!