ವರದಿ: ನ್ಯೂಸ್ ಡೆಸ್ಕ್, ವಿ ಟಿವಿ
ಮೈಸೂರು: ನಾನು ಸಿಎಂ ಆಗಿರುತ್ತಿದ್ದರೆ ಕೊರೊನಾ ಸಂಕಷ್ಟದಲ್ಲಿರುವ ರಾಜ್ಯದ ಜನರಿಗೆ ತಲಾ 10 ರೂ.ಕೊಡುತ್ತಿದ್ದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಕೊರೊನಾ ವಿಚಾರದಲ್ಲಿ ಸರ್ಕಾರ ಭ್ರಷ್ಟಾಚಾರ ನಡೆಸಿದೆ ಎಂದು ಆರೋಪಿಸಿದ್ದಾರೆ.

ಕೊರೊನಾ ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ದೇಶದ ಪ್ರಧಾನಿ ಮಾತು ಕೇಳಿ ಜಾಗಟೆ, ದೀಪ ಬೆಳಗಿಸಿದ್ದರಿಂದ ದೇಶದಲ್ಲಿ ಮತ್ತು ರಾಜ್ಯದಲ್ಲಿ ಕೊರೊನಾ ಹೆಚ್ಚಾಯ್ತು ಎಂದು ವ್ಯಂಗ್ಯವಾಡಿದ್ದಾರೆ. ಕೊರೊನಾ ವಿಚಾರದಲ್ಲಿ ಅನುದಾನ ಮಂಜೂರಾಗಿದ್ದರೂ, ಜನರಿಗೆ ತಲುಪಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದ್ದಾರೆ.

ಬಿಜೆಪಿಯ ಲೀಗಲ್ ನೋಟಿಸ್ ಗೆ ಉತ್ತರ ಕೊಡಲು ಗೊತ್ತಿದೆ:
ನಾನು ಮತ್ತು ಡಿ.ಕೆ ಶಿವಕುಮಾರ್ ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ಬಯಲಿಗೆಳೆದಿದ್ದಕ್ಕೆ ನಮ್ಮ ವಿರುದ್ಧ ಲೀಗಲ್ ನೋಟಿಸ್ ಜಾರಿಗೊಳಿಸಿದ್ದಾರೆ. ಇದಕ್ಕೆಲ್ಲ ಹೆದರುವುದಿಲ್ಲ. ಬಿಜೆಪಿಯ ಲೀಗಲ್ ನೋಟಿಸ್ ಗೆ ಉತ್ತರ ಕೊಡಲು ಗೊತ್ತಿದೆ ಎಂದು ಹೇಳಿದರು.
