Saturday, June 28, 2025
spot_imgspot_img
spot_imgspot_img

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ:

- Advertisement -
- Advertisement -

ಬೆಂಗಳೂರು: ಇಂದಿರಾನಗರದ ಪ್ರಸಿದ್ದ ಹೋಟೆಲ್ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ವಸ್ತು ಸ್ಫೋಟವಾಗಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ.
ಸ್ಫೋಟದ ತೀವ್ರತೆಗೆ ರಾಮೇಶ್ವರಂ ಕೆಫೆ ಹಾನಿಯಾಗಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಸ್ಫೋಟವಾಗುತ್ತಿದ್ದಂತೆಯೇ ಜನರು ಭಯಭೀತರಾಗಿ ಓಡಾಡಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಬ್ರೂಕ್ ಫೀಲ್ಡ್ ಆಸ್ಪತ್ರೆಯಲ್ಲಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟದಲ್ಲಿ ಗಾಯಗೊಂಡ ಮೂವರನ್ನು ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಮೂವರಲ್ಲಿ ಇಬ್ಬರ ಸ್ಥಿತಿ ನಾರ್ಮಲ್ ಇದೆ. ಓರ್ವ ಮಹಿಳೆಗೆ 40% ಗಾಯಗಳಾಗಿವೆ ಎಂದು ಬ್ರೂಕ್ ಫೀಲ್ಡ್ ಆಸ್ಪತ್ರೆಯ ಮೆಡಿಕಲ್ ನಿರ್ದೇಶಕ ಡಾ.ಪ್ರದೀಪ್ ತಿಳಿಸಿದ್ದಾರೆ.

- Advertisement -

Related news

error: Content is protected !!