Tuesday, June 16, 2026
spot_imgspot_img
spot_imgspot_img

ಬಡತನ, ನಿರುದ್ಯೋಗಕ್ಕೆ ಮನನೊಂದ ಆತ್ಮಹತ್ಯೆಗೆ ಶರಣಾದ ಸಹೋದರರು

- Advertisement -
- Advertisement -

ಮೈಸೂರು: ಮನೆಯಲ್ಲಿ ಕಿತ್ತು ತಿನ್ನುವ ಬಡತನ. ಇತ್ತ ನೆಟ್ಟಗೆ ಒಂದು ಆದಾಯದ ಮೂಲವೂ ಇಲ್ಲ. ಉದ್ಯೋಗವೂ ಇಲ್ಲ. ಇದರಿಂದ ಮನನೊಂದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಣ್ಣನ ಮೇಲೆ ಅಪಾರವಾದ ಪ್ರೀತಿ ಹೊಂದಿದ್ದ ತಮ್ಮ ಕೂಡ ಅಣ್ಣನ ಅಗಲಿಕೆಯನ್ನು ಸಹಿಸದೇ ಸಾವಿನ ಹಾದಿ ಹಿಡಿದಿದ್ದಾನೆ.

ಮನಕಲುಕುವ ಘಟನೆ ನಡೆದಿರೋದು ಮೈಸೂರಿನ ಎಚ್.ಡಿ.ಕೋಟೆ ತಾಲೂಕಿನ ಕಟ್ಟೆಮನುಗನಹಳ್ಳಿ ಗ್ರಾಮದಲ್ಲಿ. ಅಣ್ಣ ಸಿದ್ದರಾಜು ಮನೆಯಲ್ಲಿ ನೇಣಿಗೆ ಶರಣಾದರೆ, ಅಣ್ಣನ ಸಾವಿನ ಸುದ್ದಿ ತಿಳಿದು ಕ್ರಿಮಿನಾಶಕ ಸೇವಿಸಿ ತಮ್ಮ ನಾಗರಾಜು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾಗರಾಜುನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದಾದರೂ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾನೆ.

ಈ ಘಟನೆ ನಾಲ್ಕು ದಿನಗಳ ಬಳಿಕ ತಡವಾಗಿ ಬೆಳಕಿಗೆ ಬಂದಿದೆ. ಎಚ್.ಡಿ. ಕೋಟೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

- Advertisement -

Related news

error: Content is protected !!