Saturday, June 28, 2025
spot_imgspot_img
spot_imgspot_img

ಮೈಸೂರು ಗ್ಯಾಂಗ್ ರೇಪ್ ಪ್ರಕರಣ; ದುಷ್ಕೃತ್ಯದಲ್ಲಿ ಭಾಗಿಯಾಗಿದ್ದು 7 ಪಾಪಿಗಳು..! ಮುಂದುವರಿದ ಶೋಧ ಕಾರ್ಯ

- Advertisement -
- Advertisement -

ಮೈಸೂರಿನಲ್ಲಿ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಶದಲ್ಲಿರುವ ಐವರು ಆರೋಪಿಗಳು ತನಿಖೆ ವೇಳೆ ಸ್ಪೋಟಕ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಕೃತ್ಯದ ವೇಳೆ ಇದ್ದಿದ್ದು 6 ಜನ ಅಲ್ಲ. ಇನ್ನೋರ್ವ ಕೂಡಾ ಭಾಗಿಯಾಗಿದ್ದಾನೆ ಎಂದು ಪೊಲೀಸರ ಮುಂದೆ ಹೇಳಿಕೊಂಡಿದ್ದಾರೆ.

ಸದ್ಯ ತಮಿಳುನಾಡು ಮೂಲದ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಇನ್ನೋರ್ವ ತಪ್ಪಿಸಿಕೊಂಡಿದ್ದಾನೆ ಎಂದು ಹೇಳಿದ್ದರು. ಆದರೆ, ಈಗ ತಪ್ಪಿಸಿಕೊಂಡಿರುವುದು ಇಬ್ಬರು ಎಂಬ ಮಾಹಿತಿ ಲಭ್ಯವಾಗಿದ್ದು, ಒಟ್ಟು 7 ಜನ ದುಷ್ಕೃತ್ಯದಲ್ಲಿ ಭಾಗಿಯಾಗಿರುವುದು ಗೊತ್ತಾಗಿದೆ. ಹೀಗಾಗಿ ಆರೋಪಿಗಳು ನೀಡಿದ ಮಾಹಿತಿಯನ್ನು ಆಧರಿಸಿ ಇನ್ನಿಬ್ಬರಿಗಾಗಿ ಪೊಲೀಸರು ಹುಡುಕಾಟ ಶುರುಮಾಡಿದ್ದಾರೆ.

ಈ ಬಗ್ಗೆ ಡಿಜಿ, ಐಜಿಪಿ ಪ್ರವೀಣ್ ಸೂದ್ ಸುದ್ದಿಗೋಷ್ಠಿ ನಡೆಸಿದ್ದು, ವಿದ್ಯಾರ್ಥಿನಿ ಹೆದರಿಸಿ 3 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ದರೋಡೆಗೆ ಪ್ರಯತ್ನಿಸಿ ನಂತರ ಅತ್ಯಾಚಾರ ನಡೆಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಿದ್ದು, ಕಾರ್ಮಿಕರಾಗಿರುವ ಇವರು ತಮಿಳುನಾಡಿನ ಮೂಲದವರು ಎಂದು ಮಾಹಿತಿ ನೀಡಿದ್ದರು. ಇದರಲ್ಲಿ ಒಬ್ಬ ಬಾಲ ಆರೋಪಿ ಇರುವ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ಮಾಹಿತಿ ಲಭ್ಯವಾಗಿದೆ. ಆದರೆ, ಅದು ಹೆಚ್ಚಿನ ತನಿಖೆಯಿಂದಲೇ ಗೊತ್ತಾಗಬೇಕು ಎಂದಿದ್ದರು.

- Advertisement -

Related news

error: Content is protected !!