- Advertisement -
- Advertisement -



ಮೈಸೂರು: ಇಟ್ಟಿಗೆಗೂಡು ಕುಸಿದು ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಬೂದಳ್ಳಿ ಗ್ರಾಮದಲ್ಲಿ ನಡೆದಿದೆ.
ಬೂದಳ್ಳಿ ಗ್ರಾಮದ ರಾಜೇಶ್ (32), ನಾಗರಾಜು (35), ನಾರಾಯಣ್ (40) ಮೃತ ದುರ್ದೈವಿಗಳು. ಇಟ್ಟಿಗೆಗೂಡಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಗೂಡು ಕುಸಿದು ಅದರೊಳಗೆ ಸಿಲುಕಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಟಿ.ನರಸೀಪುರ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -








