Friday, May 17, 2024
spot_imgspot_img
spot_imgspot_img

ಮೈಸೂರಿನ ದಸರಾ ಉತ್ಸವದ ಉದ್ಘಾಟನೆಗೆ ಆಯ್ಕೆ ಆದ ನಾದಬ್ರಹ್ಮ ಹಂಸಲೇಖ

- Advertisement -G L Acharya panikkar
- Advertisement -

ಕರ್ನಾಟಕದ ನಾಡದೇವತೆ ಚಾಮುಂಡೇಶ್ವರಿ ಮಡಿಲಿನಲ್ಲಿರುವ ಮೈಸೂರಿನ ದಸರಾ ಉತ್ಸವದ ಉದ್ಘಾಟನೆಗೆ ನಾದಬ್ರಹ್ಮ ಹಂಸಲೇಖ ಅವರನ್ನು ಆಯ್ಕೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಾಡಿನ 413ನೇ ಮೈಸೂರು ದಸರಾ ಮಹೋತ್ಸವವನ್ನು ಖ್ಯಾತ ಸಾಹಿತಿ ಸಂಗೀತ ನಿರ್ದೇಶಕ, ನಾದಬ್ರಹ್ಮ ಹಂಸಲೇಖ ಅವರು ಉದ್ಘಾಟಿಸಲಿದ್ದಾರೆ. ಇಡೀ ವಿಶ್ವವೇ ಬೆರಗುಗಣ್ಣುಗಳಿಂದ ನೋಡುವ ಮೈಸೂರಿನ ದಸರಾವನ್ನು ಈ ಬಾರಿ ಅದ್ಧೂರಿಯಾಗಿ ಮಾಡಲಾಗುತ್ತದೆ ಎಂದು ತಿಳಿಸಿದರು.

ಇನ್ನು ಅಕ್ಟೋಬರ್ 15ರ ಬೆಳಗ್ಗೆ 10.15ರಿಂದ 10.30ರ ನಡುವಿನ ಮುಹೂರ್ತದಲ್ಲಿ ಮೈಸೂರು ದಸರಾವನ್ನು ಉದ್ಘಾಟನೆ ಮಾಡಲಾಗುತ್ತದೆ. ಕಳೆದ ಬಾರಿಯ 412ನೇ ದಸರಾವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟನೆ ಮಾಡಿದ್ದರು. ಈ ಬಾರಿ ಈ ಗೌರವ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಒಲಿದು ಬಂದಿದ್ದು, ಸಾರ್ವಜನಿಕರಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ.

- Advertisement -

Related news

error: Content is protected !!