Tuesday, June 23, 2026
spot_imgspot_img
spot_imgspot_img

ನಾಗಮಂಗಲ ‌ಕೋಮುಗಲಭೆ ಕೇಸ್‌ : ಬಂಧಿತ 55 ಆರೋಪಿಗಳಿಗೆ ಜಾಮೀನು ಮಂಜೂರು

- Advertisement -
- Advertisement -

ಗಣೇಶನ ಮೂರ್ತಿ ವಿಸರ್ಜನೆ ವೇಳೆ ಕೋಮುಗಲಭೆ ಆರಂಭಗೊಂಡು ಮಂಡ್ಯ ಜಿಲ್ಲೆಯ ನಾಗಮಂಗಲ ಹೊತ್ತಿ ಉರಿದಿತ್ತು. ಕಿಡಿಗೇಡಿಗಳು ಕಂಡಕಂಡಲ್ಲಿ ಅಂಗಡಿ ಮುಂಗಟ್ಟುಗಳಿಗೆ ಬೆಂಕಿ ಹಚ್ಚಿದ್ದರು. ಈ ಪ್ರಕರಣದಲ್ಲಿ ಬಂಧಿಸಿದ್ದ 55 ಆರೋಪಿಗಳಿಗೆ ಇದೀಗ ಜಾಮೀನು ಮಂಜೂರು ಮಾಡಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾದ ಎಲ್ಲಾ ಆರೋಪಿಗಳಿಗೆ ಮಂಡ್ಯದ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ತಲಾ ಒಂದು ಲಕ್ಷ‌ ರೂ. ಮೌಲ್ಯದ ಬಾಂಡ್, ಪ್ರತೀ ಭಾನುವಾರ ಠಾಣೆಗೆ ತೆರಳಿ ಸಹಿ ಹಾಕಬೇಕು. ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು, ಅಪರಾಧಿ ‌ಕೃತ್ಯದಲ್ಲಿ ಭಾಗಿಯಾಗದಂತೆ ಕೋರ್ಟ್‌ ಆರೋಪಿಗಳಿಗೆ ಷರತ್ತು ವಿಧಿಸಿದೆ.

ನ್ಯಾಯಾಂಗ ಬಂಧನದಲ್ಲಿದ್ದ ಎರಡೂ ಕೋಮಿನ ಒಟ್ಟು 55 ಆರೋಪಿಗಳಿಗೆ ಕೋರ್ಟ್‌ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಶನಿವಾರ ಮತ್ತು ಭಾನುವಾರ ರಜೆ ಇರುವ ಕಾರಣ ಸೋಮವಾರ ಆರೋಪಿಗಳು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ. ಸೆ.11ರಂದು ಆರೋಪಿಗಳ ಬಂಧನವಾಗಿತ್ತು. ಸೆ.12 ರಿಂದ ಆರೋಪಿಗಳು ಮಂಡ್ಯ ಕಾರಾಗೃಹದಲ್ಲಿದ್ದಾರೆ.

- Advertisement -

Related news

error: Content is protected !!