Friday, August 28, 2026
spot_imgspot_img
spot_imgspot_img

ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ; ಅಂಗೀಕಾರದ ಬಗ್ಗೆ ಹೈಕಮಾಂಡ್ ಗೊಂದಲ

- Advertisement -
- Advertisement -

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಗುರುವಾರ (ಆ.27) ನಾಗೇಂದ್ರ ಅವರು ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ತಲುಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಈ ರಾಜೀನಾಮೆಯನ್ನು ಅಂಗೀಕರಿಸಬೇಕೇ ಅಥವಾ ಬೇಡವೇ ಎಂಬ ಗೊಂದಲದಲ್ಲಿ ಪಕ್ಷದ ವರಿಷ್ಠರು ಇದ್ದು, ಈವರೆಗೆ ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ.

ನಾಗೇಂದ್ರ ಅವರು ಈಗಾಗಲೇ ತಮ್ಮ ರಾಜೀನಾಮೆ ಪತ್ರವನ್ನು ನಾಯಕತ್ವದ ಮುಂದಿಟ್ಟಿದ್ದು, ಸರ್ಕಾರಕ್ಕೆ ಮುಜುಗರವಾಗದಂತೆ ಹೆಜ್ಜೆಯಿಡಲು ಮುಂದಾಗಿದ್ದಾರೆ.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಲ್ಲಿ ಸಚಿವ ಬಿ. ನಾಗೇಂದ್ರ ಅವರ ಹೆಸರು ಕೇಳಿಬಂದಿದ್ದು, ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸೆ.1 ರಿಂದ 10 ದಿನಗಳ ಕಾಲ ಬಳ್ಳಾರಿ ಚಲೋ ಪಾದಯಾತ್ರೆಗೆ ಕರೆ ನೀಡಿದೆ. ಬಿಜೆಪಿ ಪಾದಯಾತ್ರೆಗೂ ಮುನ್ನವೇ ನಾಗೇಂದ್ರ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಹಾಗೂ ಕಾಂಗ್ರೆಸ್ ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬ ಕುತೂಹಲ ಮೂಡಿರುವುದಾಗಿ ತಿಳಿದುಬಂದಿದೆ.

- Advertisement -

Related news

error: Content is protected !!