Saturday, June 22, 2024
spot_imgspot_img
spot_imgspot_img

ಹುಲಿಯಾ ,ಬಂಡೆ ನೀವು ‘ಝೂ’ನಲ್ಲಿ ಇರಲು ಫಿಟ್.!

- Advertisement -G L Acharya panikkar
- Advertisement -

ಹಾಸನ:- ಹುಲಿಯಾ ಬಂಡೆ ನೀವು ಝೂ ನಲ್ಲಿ ಇರಲು ಫಿಟ್ ಸಮಾಜದಲ್ಲಿ ಇರಲು ಅನ್‌ಫಿಟ್ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು  ಡಿಕೆ.ಶಿವಕುಮಾರ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ.

ಹಾಸನದ ಚನ್ನರಾಯಪಟ್ಟಣದಲ್ಲಿ ಕಾಂಗ್ರೆಸ್‌ನ ಆರೋಪಕ್ಕೆ ತಿರುಗೇಟು ನೀಡಿದ ಅವರು, ಆಡಳಿತದಲ್ಲಿ ತಪ್ಪಿದ್ರೆ ವಿಧಾನಸೌಧದಲ್ಲಿ ಬಂದು ಗಲಾಟೆ ಮಾಡಿ. ನಿಮಗೆ ಹಕ್ಕಿದೆ. ಬಹಳ ಪುರಾತನ ಇತಿಹಾಸ ಇರುವ ರಾಜಕೀಯ ಪಕ್ಷವಾಗಿ ಚಿಲ್ಲರೆ ರಾಜಕಾರಣ ಮಾಡುತ್ತಿದ್ದಾರೆ. ಕೋವಿಡ್ ಸಮಯದಲ್ಲಿ ಜನರನ್ನು ಭಯಗ್ರಸ್ಥರನ್ನಾಗಿ ಮಾಡುತ್ತಿದ್ದಾರೆ. ರಾಜ್ಯ, ರಾಷ್ಟ್ರವನ್ನು ಸುದೀರ್ಘವಾಗಿ ಆಡಳಿತ ಮಾಡಿ ವೆಂಟಿಲೇಟರ್ ಇಲ್ಲ ಸೌಲಭ್ಯ ಇಲ್ಲ ಅಂತೀರಿ.‌ ಇಂದಿನ ಸ್ಥಿತಿಗೆ ನೀವೆ ಕಾರಣ. ನಿಮ್ಮ‌ ಕಾಲದಲ್ಲಿ  ಎಷ್ಟು  ವೆಂಟಿಲೇಟರ್ ಬಂದವು, ಎಲ್ಲಿ ಹೋದವು. ನಿಮ್ಮ‌ಆಡಳಿತದ ಕಾಲದಲ್ಲಿ ಡೆಂಗ್ಯೂ, ಹಾವು ಕಡಿತ, ಹುಚ್ಚು ನಾಯಿ ಕಡಿತಕ್ಕೆ ಔಷಧಿಯೇ ಬಂದಿರಲಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಷ ಹೊರಹಾಕಿದ್ದಾರೆ.

ಹುಲಿಯಾ ಬಂಡೆ ನೀವು ಝೂ ನಲ್ಲಿ ಇರಲು ಫಿಟ್ ಸಮಾಜದಲ್ಲಿ ಇರಲು ಅನ್‌ಫಿಟ್ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ.ಶಿವಕುಮಾರ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ.

Posted by VTV on Wednesday, 29 July 2020

ಇಂದಿರಾ ಕ್ಯಾಂಟೀನ್‌ನಲ್ಲಿ ಏನೆಲ್ಲಾ ಮೋಸ ಆಗಿದೆ ಲೆಕ್ಕ ಕೊಡಿ. ನಿಮ್ಮ‌ ಕಾಲದಲ್ಲಿ‌ ವಸತಿ ಯೋಜನೆಯಲ್ಲಿ ಅಕ್ರಮ‌ ನಡೆದಿದೆ. ಪ್ರಜಾಪ್ರಭುತ್ವದ ಕಗ್ಗೊಲೆ ಅಂತೀರಿ. ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದವರು ಇಂದಿರಾ ಗಾಂಧಿ. ಎಮರ್ಜೆನ್ಸಿ ತಂದವರು, ದೇಶವನ್ನು ಪೂರ್ತಿಯಾಗಿ ಜೈಲಲ್ಲಿ ಇಟ್ಟವರು ನೀವು ತಾನೆ. ೨೦ ಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ಬಹುಮತ ಪಡೆದ ಪಕ್ಷವನ್ನು ಕಿತ್ತು ಒಗೆದಿದ್ರಿ. ಜನತಾದಳದ ಶಾಸಕರನ್ನು ನೀವೆ ಅಲ್ಲವೆ ತೆಗೆದಿಕೊಂಡಿದ್ದು. ನೀವು ಅಧಿಕಾರ ಹೇಗೆ ಬೇಕಾದ್ರು ನಡೆಸಬಹುದು. ನಿಮ್ಮ ಆಡಳಿತ ಸರಿಯಿಲ್ಲ ಎಂದು ರಾಜೀನಾಮೆ ಕೊಟ್ಟು ಬಿಜೆಪಿಗೆ ಬಂದರೆ ಆಡಳಿತ ಸರಿಯಿಲ್ಲಾ ಅಂತೀರಾ ಎಂದು ಸಿದ್ದರಾಮಯ್ಯ, ಡಿಕೆಶಿ ಆರೋಪಕ್ಕೆ ನಳೀನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ.

- Advertisement -

Related news

error: Content is protected !!