Thursday, May 2, 2024
spot_imgspot_img
spot_imgspot_img

ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ವೈರಲ್; ಈಶ್ವರಪ್ಪ ಏನು ಹೇಳಿದ್ದಾರೆ ಗೊತ್ತಾ?

- Advertisement -G L Acharya panikkar
- Advertisement -

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ತುಳುವಿನಲ್ಲಿರುವ ಆಡಿಯೋ ವೈರಲ್ ಮತ್ತು ಅದರಲ್ಲಿ ಉಲ್ಲೇಖಿತ ಶೆಟ್ಟರ್, ಈಶ್ವರಪ್ಪ ಸೈಡ್ ಲೈನ್ ಬಗ್ಗೆ ಶಿವಮೊಗ್ಗದಲ್ಲಿ ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ ನಮ್ಮ ಪಕ್ಷದ ರಾಜ್ಯಾಧ್ಯಕ್ಷರ ಮೇಲೆ ನಂಬಿಕೆಯಿದೆ. ಯಾರೋ ಹುಚ್ಚರು ಆಡಿಯೋವನ್ನು ಸೃಷ್ಟಿ ಮಾಡಿದ್ದು, ಯಾರು ಈ ಆಡಿಯೋ ವೈರಲ್ ಮಾಡಿದ್ದಾರೆ ಎನ್ನುವ ಬಗ್ಗೆ ತನಿಖೆಯಾಗಲಿದೆ. ನಳಿನ್ ಕುಮಾರ್‌ ವಿರುದ್ಧ ವ್ಯವಸ್ಥಿತ ಸಂಚು ರೂಪಿಸಿ ಅವರನ್ನು ಬಲಿಪಶು ಮಾಡಲು ಹೊರಟಿದ್ದಾರೆ. ನಳಿನ್ ಕುಮಾರ್ ಕಟೀಲ್ ಆಡಿಯೋ ನನ್ನದಲ್ಲ ಎಂದು ಹೇಳಿದ್ದು, ಹೀಗಾಗಿ ಈ ಬಗ್ಗೆ ತನಿಖೆ ಅಗತ್ಯವಿಲ್ಲ. ಬದಲಾಗಿ ಆಡಿಯೋ ವೈರಲ್ ಮಾಡಿರುವವರ ಬಗ್ಗೆ ತನಿಖೆಯಾಗಬೇಕು ಎಂದು ಈಶ್ವರಪ್ಪ ಆಗ್ರಹಿಸಿದ್ದಾರೆ.

ಸಚಿವ ಸ್ಥಾನ ಹೋದರೆ ಒಂದು ಗೂಟ ಹೋದಂತೆ, ಅಧಿಕಾರಕ್ಕೆ ಯಾರೂ ಸಹ ಗೂಟ ಹೊಡೆದು ಕುಳಿತಿಲ್ಲ. ನನ್ನನ್ನು ಯಾರೂ ಏನೂ ಮಾಡಲು ಆಗದು, ನಾನು ಮೊದಲಿನಿಂದಲೂ ಹೋರಾಟ ಮಾಡಿಕೊಂಡು ಬಂದವನು ಎಂದು ಹೇಳಿದ್ದಾರೆ. ನನ್ನ ವಿರುದ್ಧ ಷಡ್ಯಂತ್ರ ನಡೆದರೂ ತಲೆ ಕೆಡಿಸಿಕೊಳ್ಳಲ್ಲಾ, ನನಗೆ ನಮ್ಮ ಪಕ್ಷದ ಅಧ್ಯಕ್ಷರ ಬಗ್ಗೆ ನಂಬಿಕೆಯಿದೆ. ಆಡಿಯೋ ಬಗ್ಗೆ ಅಧ್ಯಕ್ಷರೇ ತನಿಖೆ ನಡೆಸಲಿ ಎಂದು ಈಶ್ವರಪ್ಪ ಹೇಳಿದ್ದಾರೆ.

- Advertisement -

Related news

error: Content is protected !!