- Advertisement -
- Advertisement -
ಮಂಗಳೂರು:ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರ ಜೊತೆ ಮಾತನಾಡಿ ಮುಖ್ಯಮಂತ್ರಿಯೇ ನಿರ್ಧಾರ ಕೈಗೊಳ್ಳುತ್ತಾರೆ,ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರ ಜೊತೆ ಮಾತನಾಡಿ ಮುಖ್ಯಮಂತ್ರಿಯೇ ನಿರ್ಧಾರ ಕೈಗೊಳ್ಳುತ್ತಾರೆ,
Posted by VTV on Saturday, 1 August 2020
ಮಂಗಳೂರಿನಲ್ಲಿ ಮಾತನಾಡಿದ ಅವರು ಸಚಿವ ಸಂಪುಟ ವಿಸ್ತರಣೆಯಾದಾಗ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಶಾಸಕ, ಹಿರಿಯರೂ ಆದ ಎಸ್ ಅಂಗಾರ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ನನ್ನ ಅಭಿಪ್ರಾಯ ಹಾಗೂ ಬೇಡಿಕೆ ಇದೆ. ಮುಖ್ಯಮಂತ್ರಿಯವರ ಮುಂದೆ ನನ್ನ ಅಭಿಪ್ರಾಯವನ್ನು ಇಟ್ಟಿದ್ದೇನೆ.ಮಂತ್ರಿ ಸ್ಥಾನ ಕೊಡೋದು ಮುಖ್ಯಮಂತ್ರಿಯವರ ವಿವೇಚನೆಗೆ ಬಿಟ್ಟ ವಿಚಾರ.ಅವರೇ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.
- Advertisement -