Wednesday, April 24, 2024
spot_imgspot_img
spot_imgspot_img

ಕಾಂಗ್ರೆಸ್ ಕೂಟದಲ್ಲಿ ಮ್ಯೂಸಿಕಲ್ ಚೇರ್ ಆಟ ಆರಂಭವಾಗಿದೆ; ಕಟೀಲ್ ಲೇವಡಿ

- Advertisement -G L Acharya panikkar
- Advertisement -

ಕೊಪ್ಪಳ: ಕಾಂಗ್ರೆಸ್ ಕೂಸು ಹುಟ್ಟುವ ಮೊದಲೇ ಕುಲಾಯಿ ಹೊಲಿಸಿದಂತೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಬಣದ ನಡುವೆ ಸಿಎಂ ಖುರ್ಚಿಗಾಗಿ ಹಗ್ಗಜಗ್ಗಾಟ ನಡೆದಿದೆ. ಸಂಗೀತ ಖುರ್ಚಿ ಆಟ ಆರಂಭವಾಗಿದೆ. ಪಕ್ಷ ಆಡಳಿತದಲ್ಲಿ ಇಲ್ಲದೇ ಇದ್ದರೂ ಕಾಂಗ್ರೆಸ್ ತನ್ನ ಅಧಿಕಾರದ ಛಾಳಿ ಬಿಟ್ಟಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ.

ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಕಾಂಗ್ರೆಸ್ನಲ್ಲಿ ವಲಸಿಗ, ಮೂಲ ಕಾಂಗ್ರೆಸ್ಸಿಗರೆಂಬ ಗೊಂದಲ ಆರಂಭವಾಗಿದೆ. ಸಿದ್ದರಾಮಯ್ಯರನ್ನು ಮೂಲ ಕಾಂಗ್ರೆಸ್ಸಿಗರು ಒಪ್ಪುತ್ತಿಲ್ಲ. ಹೀಗಾಗಿ ಮ್ಯೂಸಿಕಲ್ ಚೇರ್ ಆಟ ಆರಂಭವಾಗಿದೆ. ಸಿಎಂ ಸ್ಥಾನಕ್ಕಾಗಿ ಈಗಿನಿಂದಲೇ ಟವೆಲ್ ಹಾಕುತ್ತಿದ್ದಾರೆ. ಇನ್ನು ಮದುವೆಯೇ ಆಗಿಲ್ಲ. ಈಗಲೇ ಮಗುವಿಗೆ ಕುಲಾಯಿ ಹೊಲಿಸುವ ಕೆಲಸ ಮಾಡುತ್ತಿದ್ದಾರೆಂದು ವ್ಯಂಗ್ಯವಾಡಿದರು.

ರಮೇಶ ಜಾರಕಿಹೊಳಿ ರಾಜೀನಾಮೆ ನೀಡುವ ಬಗ್ಗೆ ನನ್ನೊಂದಿಗೆ ಮಾತನಾಡಿಲ್ಲ. ಅವರ ಸಮಸ್ಯೆಗಳೇನಿದ್ದರೂ ಪರಿಹರಿಸಲಾಗುವುದು. ಸಣ್ಣಪುಟ್ಟ ಗೊಂದಲ ಇದ್ದವು. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬಂದು ಪರಿಹರಿಸಿದ್ದಾರೆ. ಸದ್ಯಕ್ಕೆ ಬಿಜೆಪಿಯಲ್ಲಿ ಯಾವುದೇ ಭಿನ್ನಾಭಿಪ್ರಾಯ, ಗೊಂದಲಗಳಿಲ್ಲ. ಇದ್ದಲ್ಲಿ ಪರಪಸ್ಪರ ಮಾತನಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದರು.

- Advertisement -

Related news

error: Content is protected !!