- Advertisement -
- Advertisement -
ವರದಿ: ನ್ಯೂಸ್ ಡೆಸ್ಕ್, ವಿ ಟಿವಿ
ಬಿಜೆಪಿ ಸರ್ಕಾರ ಸುಭದ್ರವಾಗಿದೆ. ಮುಂದಿನ ಮೂರು ವರ್ಷವೂ ಬಿ.ಎಸ್ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ ನೀಡಿದ್ದಾರೆ.
ಸಿಎಂ ಬದಲಾವಣೆ ಬಗ್ಗೆ ಕಳೆದೊಂದು ವಾರದಿಂದ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಯಾಗುತ್ತಿತ್ತು. ಈ ಬಗ್ಗೆ ಚಾಮರಾಜನಗರದ ಕೊಳ್ಳೇಗಾಲದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ , ಬಿಜೆಪಿ ಸರ್ಕಾರದ ಬಗ್ಗೆ ಸಂಶಯಬೇಡ ಎಂದು ಎಲ್ಲ ಊಹಾಪೋಹಳಿಗೆ ತೆರೆ ಎಳೆದಿದ್ದಾರೆ.
ಪಕ್ಷದ ಯಾರೊಬ್ಬರು ಕೂಡ ಸಿಎಂ ಬದಲಾವಣೆ ಬಗ್ಗೆ ಮಾತನಾಡಿಲ್ಲ. ನಮ್ಮ ಪಕ್ಷದಲ್ಲಿ ತಮ್ಮದೇ ಆದ ಶಿಸ್ತು, ನಿಯಮಗಳಿವೆ. ಹೀಗಾಗಿ ಯಾರೂ ನಿಯಮ ಉಲ್ಲಂಘಿಸುವ ಕೆಲಸ ಮಾಡುವುದಿಲ್ಲ ಎಂದು ಹೇಳಿದರು.
- Advertisement -