Saturday, April 20, 2024
spot_imgspot_img
spot_imgspot_img

ಹಗಲಿರುಳು ಶ್ರಮಿಸುತ್ತಿರುವ ವೈದ್ಯರಲ್ಲಿ, ದಾದಿಯರಲ್ಲಿ, ಆರೋಗ್ಯ ಸಿಬ್ಬಂದಿಗಳಲ್ಲಿ ದೇವರನ್ನು ಕಂಡೆ.-ನಳಿನ್ ಕುಮಾರ್ ಕಟೀಲ್

- Advertisement -G L Acharya panikkar
- Advertisement -

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕೊರೊನಾದಿಂದ ಗುಣಮುಖರಾಗಿದ್ದು,  ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಸದ್ಯ ಕ್ವಾರಂಟೈನ್‍ನಲ್ಲಿದ್ದಾರೆ. ನಳಿನ್ ಕುಮಾರ್ ಅವರಿಗೆ ಆಗಸ್ಟ್ 30 ರಂದು ಕೊರೊನಾ ಪಾಸಿಟಿವ್ ದೃಢವಾಗಿತ್ತು.

ಕಟೀಲು ದುರ್ಗಾಪರಮೇಶ್ವರಿ ದೇವಿಯ ಕೃಪೆ, ನಿಮ್ಮೆಲ್ಲರ ಪ್ರೀತಿ, ಹಾರೈಕೆಯ ಫಲವಾಗಿ ಕೊರೊನಾ ಕಾಯಿಲೆಯಿಂದ ಗುಣಮುಖನಾಗಿದ್ದೇನೆ. ಸದ್ಯ ಕೆಲವು ದಿನಗಳ ತನಕ ಕ್ವಾರಂಟೈನ್‍ನಲ್ಲಿ ಇರಲು ವೈದ್ಯರು ಸಲಹೆ ನೀಡಿದ್ದಾರೆ” ಎಂದು ನಳಿನ್ ಕುಮಾರ್ ತಿಳಿಸಿದ್ದಾರೆ.

ಮೊತ್ತೊಂದು ಟ್ವೀಟ್ ಮಾಡಿದ್ದು, “ನಾನು ಭಗವಂತನನ್ನು ಕಣ್ಣಾರೆ ನೋಡಿದವನಲ್ಲ. ಆದರೆ ತಮ್ಮ ಅಮೂಲ್ಯ ಪ್ರಾಣವನ್ನು ಪಣಕ್ಕಿಟ್ಟು ನಮ್ಮ ಆರೋಗ್ಯಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ವೈದ್ಯರಲ್ಲಿ, ದಾದಿಯರಲ್ಲಿ, ಆರೋಗ್ಯ ಸಿಬ್ಬಂದಿಯಲ್ಲಿ ದೇವರನ್ನು ಕಂಡೆ” ಎಂದು ವೈದ್ಯರು, ದಾದಿಯರಿಗೆ ಧನ್ಯವಾದ ತಿಳಿಸಿದ್ದಾರೆ.

- Advertisement -

Related news

error: Content is protected !!