Monday, April 29, 2024
spot_imgspot_img
spot_imgspot_img

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ಘೋಷಣೆ

- Advertisement -G L Acharya panikkar
- Advertisement -

2023ನೇ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲನ್ನು ಅನುಭವಿಸಿತ್ತು.ಈ ಸೋಲಿನ ಹೊಣೆಯನ್ನು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಅವರು ಹೊತ್ತುಕೊಂಡಿದ್ದರು. ಅಲ್ಲದೆ, ಈಗಾಗಲೇ ನನ್ನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳೀನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.

ಬಳ್ಳಾರಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನಳೀನ್‌ ಕುಮಾರ್‌ ಕಟೀಲ್‌ ಈಗಾಗಲೇ ನನ್ನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಎರಡು ವರ್ಷದ ಅವಧಿ ಮುಗಿದಿದೆ. ನಾನು ರಾಜೀನಾಮೆಯನ್ನೂ ನೀಡಿದ್ದೇನೆ. ಲಿಖಿತ ಹಾಗೂ ಮೌಖಿಕವಾಗಿ ರಾಜೀನಾಮೆ ಸಲ್ಲಿಕೆ ಮಾಡಿದ್ದೇನೆ ಎಂದು ಹೇಳಿದ್ದಾರೆ.

ನಳೀನ್‌ ಕುಮಾರ್‌ ಕಟೀಲ್‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲಿಯೇ, ಬಿಜೆಪಿಯಲ್ಲಿ ಈ ಸ್ಥಾನಕ್ಕೆ ಭಾರೀ ಪೈಪೋಟಿ ನಡೆದಿದೆ‌. ಹಿರಿಯ ನಾಯಕ ವಿ ಸೋಮಣ್ಣ ಈಗಾಗಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ.

- Advertisement -

Related news

error: Content is protected !!