Friday, March 29, 2024
spot_imgspot_img
spot_imgspot_img

ನರೇಂದ್ರ ಮೋದಿಯವರ ಹುಟ್ಟು ಹಬ್ಬ ಎನ್ಎಸ್ ಯುಐ ವತಿಯಿಂದ ಪಕೋಡ ಮಾಡಿ ವಿನೂತನ ಪ್ರತಿಭಟನೆ

- Advertisement -G L Acharya panikkar
- Advertisement -

ಮಂಗಳೂರು:- ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ರಾಷ್ಟ್ರೀಯ ನಿರುದ್ಯೋಗ ದಿನವನ್ನಾಗಿ ಎನ್ಎಸ್ ಯುಐ ವತಿಯಿಂದ ನಗರದ ಜಲ್ಲಾ ಕಾಂಗ್ರೆಸ್ ಕಛೇರಿಯ ಮುಂಭಾಗ  ಪಕೋಡ ಮಾಡಿ ವಿನೂತನ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಎನ್ಎಸ್ ಯು ಐ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸವಾದ್ ಸುಳ್ಯ ಮಾತನಾಡಿ, ಪ್ರಧಾನಿ ಮೋದಿಯವರ ಹುಟ್ಟುಹಬ್ಬವನ್ನು ಎನ್ಎಸ್ ಯುಐ ದ.ಕ.ಜಿಲ್ಲಾ ಸಮಿತಿ ರಾಷ್ಟ್ರೀಯ ನಿರುದ್ಯೋಗ ದಿನವನ್ನಾಗಿ ವಿನೂತನ ರೀತಿಯಲ್ಲಿ ಆಚರಿಸುತ್ತಿದೆ. ವರ್ಷಕ್ಕೆ 12ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತದೆ ಎಂದು ಹೇಳಿದ ಕೇಂದ್ರ ಸರ್ಕಾರ, ವರ್ಷಕ್ಕೆ 2.50 ಕೋಟಿ ಉದ್ಯೋಗ ನಷ್ಟ ಮಾಡುವಂತಹ ಸನ್ನಿವೇಶವನ್ನು ಸೃಷ್ಟಿ ಮಾಡುತ್ತಿದೆ.

 ಅವೈಜ್ಞಾನಿಕವಾಗಿ ಲಾಕ್ ಡೌನ್ ಘೋಷಣೆ ಮಾಡಿ ವಿದ್ಯಾರ್ಥಿಗಳನ್ನು ,ಕೃಷಿಕರನ್ನು ,ಬಡವರನ್ನು ಬೀದಿಗೆ ತಂದು ನಿಲ್ಲಿಸಿದೆ ಎಂದು ಹೇಳಿದರು. ಇಂಜಿನಿಯರಿಂಗ್, ಎಂಬಿಬಿಎಸ್ ಪದವೀಧರರು ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಅನ್ವಯ 250ರೂ ವೇತನಕ್ಕೆ ದುಡಿಯುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ.ಅಲ್ಲದೆ ಪಕೋಡ ಮಾರಿ ಬದುಕುತ್ತಿರಬೇಕಾದ ಸನ್ನಿವೇಶ ಸೃಷ್ಟಿಯಾಗಿದೆ. ಎಂದರು.ಇಲ್ಲಿನ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿರುವ ಉದ್ಯೋಗ ನಿರ್ಮಿಸಿದಿದ್ದಲ್ಲಿ ಮುಂದಿನ ಚುನಾವಣೆಯಲ್ಲಿ ವಿದ್ಯಾರ್ಥಿಗಳು ಯುವ ಸಮೂಹ ಕೇಂದ್ರ ಬಿಜೆಪಿ ಸರಕಾರವನ್ನು ಕಿತ್ತೊಗೆಯಲಿದೆ ಎಂದು ಸಮಾದ್ ಸುಳ್ಯ ಹೇಳಿದರು.

- Advertisement -

Related news

error: Content is protected !!