Saturday, June 20, 2026
spot_imgspot_img
spot_imgspot_img

ಪ್ರಧಾನಿ ಮೋದಿಯವರನ್ನ ಭೇಟಿ ಮಾಡಲು ದೆಹಲಿಗೆ ಹೋಗುತ್ತಿರುವ ಯಡಿಯೂರಪ್ಪನವರಿಗೆ ಸಿದ್ದರಾಮಯ್ಯನವರು ಕಿವಿಮಾತು

- Advertisement -
- Advertisement -

ಬೆಂಗಳೂರು: ಕೊನೆಗೂ ಪ್ರಧಾನಿ ಮೋದಿ ಭೇಟಿಗೆ ಅವಕಾಶ ಪಡೆದಿದ್ದೀರಿ. ಈ ಅವಕಾಶವನ್ನು ನಿಮ್ಮ ಕುರ್ಚಿ ಉಳಿಸಿಕೊಳ್ಳುವ ಕಸರತ್ತಿಗೆ ಬಳಸಿಕೊಳ್ಳದೆ ರಾಜ್ಯದ ಹಿತರಕ್ಷಣೆಗಾಗಿ ನಾಲ್ಕು ಮಾತುಗಳನ್ನು ಕಡಕ್ ಆಗಿ ಕೇಳಲು ಬಳಸಿಕೊಳ್ಳಿ, ರಾಜ್ಯದ ಜನ ನಿಮ್ಮ ಬೆನ್ನ ಹಿಂದಿದ್ದಾರೆ ಎಂದು ಪ್ರಧಾನಿ ಮೋದಿಯವರನ್ನ ಭೇಟಿ ಮಾಡಲು ದೆಹಲಿಗೆ ಹೋಗುತ್ತಿರುವ ಸಿಎಂ ಬಿಎಸ್ ಯಡಿಯೂರಪ್ಪನವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಕಿವಿಮಾತು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯನವರು, ಯಡಿಯೂರಪ್ಪನವರು ಕಳೆದ ವರ್ಷದ ಅತಿವೃಷ್ಟಿಗೆ ರೂ.35000 ಕೋಟಿ ಪರಿಹಾರ ಕೇಳಿದ್ದರು ಆದ್ರೆ ಕೇಂದ್ರ ಸರಕಾರ ನೀಡಿದ್ದು ರೂ.1,869 ಕೋಟಿ. ಈ ಬಾರಿ ರೂ.8000 ಕೋಟಿ ನಷ್ಟವಾಗಿದೆ ಎಂ ದು ಹೇಳುತ್ತಿದ್ದೀರಿ. ಕಳೆದ ವರ್ಷದ ಬಾಕಿ ಜೊತೆ ಈ ವರ್ಷದ ಪರಿಹಾರವನ್ನು ಉದಾರವಾಗಿ ಕೊಡುವಂತೆ ಕೇಳಿಕೊಳ್ಳಿ ಎಂದಿದ್ದಾರೆ.

- Advertisement -

Related news

error: Content is protected !!