- Advertisement -
- Advertisement -
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಲು ಪ್ರಧಾನಿ ಮೋದಿ ಜತೆ ಡಿಸಿಎಂ ಅಶ್ವಥ್ ನಾರಾಯಣ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿದ್ರು. ಬಳಿಕ ಸುದ್ದಿಗೋಷ್ಠಿ ನಡೆಸಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕೈಗೊಂಡ ಕ್ರಮದ ಬಗ್ಗೆ ಮಾಹಿತಿ ನೀಡಿದ್ದೇವೆ ಎಂದು ತಿಳಿಸಿದರು.
ಮರಣ ಪ್ರಮಾಣ ಕಡಿಮೆ ಇರಬೇಕು ಎಂಬುದು ನಮ್ಮ ಧ್ಯೇಯ. ಭಾರತದಲ್ಲಿ ಶೇ.1.99, ಕರ್ನಾಟಕಲ್ಲಿ ಶೇ.1.8 ಹಾಗೂ ಶೇ.1.7 ರಷ್ಟು ಇದೆ ಎಂದು ತಿಳಿಸಿದರು.
ಇದರ ಜತೆಗೆ ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದವರ ಬಗ್ಗೆಯೂ ಮಾಹಿತಿ ನೀಡಲಾಗಿದೆ. ಮಾರ್ಗಸೂಚಿಯಲ್ಲಿ ಕೆಲ ಬದಲಾವಣೆಗೆ ಮನವಿ ಮಾಡಿದ್ದೇವೆ ಎಂದು ಹೇಳಿದರು.
- Advertisement -