- Advertisement -
- Advertisement -
ನ್ಯೂಯಾರ್ಕ್: ಕೊರೊನಾ ವೈರಸ್ ಚೇತರಿಕೆ ದರದಲ್ಲಿ ಭಾರತದ ಆರೋಗ್ಯ ವ್ಯವಸ್ಥೆ ವಿಶ್ವದಲ್ಲೇ ಅತ್ಯುತ್ತಮವಾಗಿದೆ ಎಂದು ಪ್ರಧಾನಿ ಮೋದಿ ಹೊಗಳಿದ್ದಾರೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ ಕಳೆದ ತಿಂಗಳು ತಾತ್ಕಾಲಿಕ ಸದಸ್ಯತ್ವ ಪಡೆದುಕೊಂಡ ನಂತರ ಮೊದಲ ಬಾರಿಗೆ ಅದರ ಅಧಿವೇಶನದಲ್ಲಿ ಪ್ರಧಾನಿ ಮೋದಿ ಮಾತನಾಡಿದರು.
ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಅವರು, ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10 ಲಕ್ಷ ಗಡಿ ದಾಟಿದೆ. ಇದರಲ್ಲಿ ಸೋಂಕಿನಿಂದ ಗುಣಮುಖರಾದವರ ಹೆಚ್ಚಿದೆ. ಭಾರತದಲ್ಲಿ ರಿಕವರಿ ರೇಟ್ ಶೇ.62 ಇದೆ. ಸರ್ಕಾರ ಹಾಗೂ ಜನರು ಕೊರೊನಾ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ಇನ್ನು ನಮ್ಮ ದೇಶ ಅಭಿವೃದ್ಧಿ ಹೊಂದುತ್ತಿರುವುದು ಮಾತ್ರವಲ್ಲದೇ, ಸಣ್ಣ ರಾಷ್ಟ್ರಗಳ ಏಳಿಗೆ ಬಗ್ಗೆಯೂ ಚಿಂತನೆ ನಡೆಸಿದ್ದೇವೆ. ನಮ್ಮ ಅಭಿವೃದ್ಧಿ ಉದ್ದೇಶಗಳನ್ನು ನಾವು ತಲುಪಿದ್ದೇವೆ ಎಂದರು. ಈ ವೇಳೆ ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಯೂ ಪ್ರಸ್ತಾಪ ಮಾಡಿದರು.
- Advertisement -