Saturday, June 28, 2025
spot_imgspot_img
spot_imgspot_img

ಉಳ್ಳಾಲ: ಬಸ್ – ಮೆಡಿಕಲ್ ಕಾಲೇಜು ವಾಹನ ಢಿಕ್ಕಿ; ಹಲವರಿಗೆ ಗಾಯ..!

- Advertisement -
- Advertisement -
This image has an empty alt attribute; its file name is indane-gas-2-1024x748.jpg

ಉಳ್ಳಾಲ: ರೂಟ್ ಬಸ್ ಮತ್ತು ಮೆಡಿಕಲ್ ಕಾಲೇಜು ಬಸ್ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಗಾಯಗೊಂಡ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಉರುಮಣೆ ಬಳಿ ನಡೆದಿದೆ.

ಪುತ್ತೂರಿನಿಂದ ಮಂಜನಾಡಿ ರಸ್ತೆಯಾಗಿ ಮಂಗಳೂರಿಗೆ ತೆರಳುತ್ತಿದ್ದ ಶಿವಶಂಕರ್ ಬಸ್ ಮತ್ತು ಯೇನಪೋಯ ಮೆಡಿಕಲ್ ಕಾಲೇಜಿನ ಬಸ್ ಪರಸ್ಪರ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ಎರಡು ವಾಹನಗಳಿಗೂ ಹಾನಿಯಾಗಿದೆ. ಘಟನೆಯಿಂದ ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.

ಘಟನಾ ಸ್ಥಳಕ್ಕೆ ದಕ್ಷಿಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!