Friday, April 26, 2024
spot_imgspot_img
spot_imgspot_img

ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮದ್ಯ ಮಾರಾಟ ನಿಷೇಧ; ಸುಪ್ರೀಂ ಕೋರ್ಟ್ ಆದೇಶ

- Advertisement -G L Acharya panikkar
- Advertisement -

ನವದೆಹಲಿ: ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಸುಪ್ರೀಂಕೋರ್ಟ್​ ಆದೇಶ ಹೊರಡಿಸಿದೆ. ಇನ್ನು ಮುಂದೆ ಯಾವುದೇ ಕಾರಣಕ್ಕೂ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಮದ್ಯ ಮಾರಾಟ ಮಾಡಬಾರದು. ಇದಕ್ಕೆ ಸರ್ಕಾರಗಳು ಕೂಡ ಪರವಾನಗಿ ನೀಡಬಾರದು ಎಂದು ಖಡಕ್​​ ಆಗಿ ಹೇಳಿದೆ.

ಯಾವುದೇ ಹೆದ್ದಾರಿಗಳ 500 ಮೀಟರ್ ವ್ಯಾಪ್ತಿಯೊಳಗೆ ಮದ್ಯದಂಗಡಿ ತೆರೆಯಬಾರದು. ವಿಶೇಷವಾಗಿ 20 ಸಾವಿರಕ್ಕಿಂತ ಕಡಿಮೆ ಜನರು ವಾಸಿಸುವ ಸ್ಥಳಗಳಲ್ಲಿರುವ ಹೆದ್ದಾರಿಗಳ 220 ಮೀಟರ್ ವ್ಯಾಪ್ತಿಯೊಳಗೆ ಯಾವುದೇ ರೀತಿಯ ಮದ್ಯ ಮಾರಾಟಕ್ಕೆ ಸರ್ಕಾರ ಅನುಮತಿ ಕೊಡಬಾರದು ಎಂದು ಆದೇಶಿಸಿದೆ.

ಸುಪ್ರೀಂಕೋರ್ಟ್​ ಆದೇಶದ ಬೆನ್ನಲ್ಲೇ ಕೇಂದ್ರ ಸಾರಿಗೆ ಇಲಾಖೆ ರಾಷ್ಟ್ರೀಯ ಹೆದ್ದಾರಿಗಳಲ್ಲಿರುವ ಮದ್ಯದಂಗಡಿಗಳ ಮಾಹಿತಿ ಕಲೆ ಹಾಕುತ್ತಿದೆ. ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿರುವ ಮದ್ಯದ ಅಂಗಡಿಗಳನ್ನು ಆಯಾ ಸ್ಥಳೀಯ ಸರ್ಕಾರಗಳೊಂದಿಗೆ ಚರ್ಚಿಸಿ ತೆರವುಗೊಳಿಸಲಾಗುತ್ತದೆ.

- Advertisement -

Related news

error: Content is protected !!