Thursday, April 25, 2024
spot_imgspot_img
spot_imgspot_img

ಉಕ್ರೇನ್ ನೆಲದಲ್ಲಿ ಮೃತಪಟ್ಟ ನವೀನ್ ಮೃತದೇಹ 20 ದಿನಗಳ ನಂತರ ತಾಯ್ನಾಡಿಗೆ

- Advertisement -G L Acharya panikkar
- Advertisement -

ಉಕ್ರೇನ್‌ನಲ್ಲಿ ರಷ್ಯಾ ಪಡೆಗಳು ನಡೆಸಿದ ಬಾಂಬ್‌ ದಾಳಿಯಲ್ಲಿ ಮಾ. 2ರಂದು ಮೃತಪಟ್ಟ ಹಾವೇರಿ ಜಿಲ್ಲೆಯ ಚಳಗೇರಿ ಗ್ರಾಮದ ನವೀನ್‌ ಗ್ಯಾನಗೌಡರ ಅವರ ಮೃತದೇಹ 20 ದಿನಗಳ ಬಳಿಕ ತಾಯ್ನಾಡನ್ನು ಸೇರಿದೆ.

ಇಂದು ನಸುಕಿನ ಜಾವದಲ್ಲಿ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನವೀನ್ ಮೃತದೇಹಕ್ಕೆ ವಿಮಾನ ನಿಲ್ದಾಣದಲ್ಲಿ ಗೌರವ ಪೂರ್ವಕ‌ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್, ಸಂಸದ ಶಿವಕುಮಾರ ಉದಾಸಿ, ಶಾಸಕರಾದ ಅರುಣ್ ಕುಮಾರ್, ಸಲೀಂ ಮುಹಮದ್ ಮತ್ತು ಇತರರು ಉಪಸ್ಥಿತರಿದ್ದರು.

ಬೆಂಗಳೂರಿನಿಂದ ಈಗಾಗಲೇ ನವೀನ್‌ ಗ್ರಾಮಕ್ಕೆ ಪಾರ್ಥಿವ ಶರೀರ ಕೊಂಡೊಯ್ಯೊಲಾಗುತ್ತಿದೆ. ಮನೆ ಮಗನನ್ನು ಕಳೆದುಕೊಂಡಿರುವ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಈ ನಡುವೆ ಕುಟುಂಬಸ್ಥರು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಮೃತ ದೇಹವನ್ನು ದಾವಣಗೆರೆ ಎಸ್ ಎಸ್ ಮೆಡಿಕಲ್ ಕಾಲೇಜಿಗೆ ಹಸ್ತಾಂತರ ಮಾಡಲು ನಿರ್ಧರಿಸಿದ್ದಾರೆ.

- Advertisement -

Related news

error: Content is protected !!