




ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಜವಾಹರ್ ನವೋದಯ ವಿದ್ಯಾಲಯಕ್ಕೆ 6ನೇ ತರಗತಿಯಿಂದ 12ನೇ ತರಗತಿ ತನಕ ಸಂಪೂರ್ಣ ಉಚಿತ ಶಿಕ್ಷಣ ಪ್ರವೇಶ ನೀಡುವ ಸಂಬಂಧ, ಶಾಲೆ ಪ್ರವೇಶಾತಿ ಪರೀಕ್ಷೆಗೆ ಅರ್ಜಿ ಅಹ್ವಾನಿಸಲಾಗಿದೆ
2025 ನೇ ಸಾಲಿನ ಆರನೇ ತರಗತಿಯ ಪ್ರವೇಶಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು ಮೇ 01, 2013 ರಿಂದ ಜುಲೈ 01, 2015 ರ ಅವಧಿಯಲ್ಲಿ ಜನಿಸಿರಬೇಕು.
ವಿದ್ಯಾರ್ಥಿಗಳ ಆಯ್ಕೆ :
ನವೋದಯ ಪ್ರವೇಶಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಮೊದಲು ಪ್ರವೇಶಾತಿ ಪರೀಕ್ಷೆ ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳ ಮೆರಿಟ್ ಲಿಸ್ಟ್ ಸಿದ್ಧ ಪಡಿಸಿ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆಗೆ ಕರೆಯಲಾಗುವುದು. ದಾಖಲಾತಿ ಪರಿಶೀಲನೆ ನಂತರ ಅರ್ಹ ವಿದ್ಯಾರ್ಥಿಗಳನ್ನು ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
‘ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 7 ಅಕ್ಟೋಬರ್ 2024
- ಲಿಖಿತ ಪರೀಕ್ಷೆ ದಿನಾಂಕ : ಜನವರಿ 18, 2025
ಹೆಚ್ಚಿನ ಮಾಹಿತಿಗಾಗಿ:
https://navodaya.gov.in/nvs/en/Home1