Saturday, April 20, 2024
spot_imgspot_img
spot_imgspot_img

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಮಕ್ಕಳ ಕಲಿಕೆಯ ಹೆಚ್ಚಾಗಲಿದೆ- ಡಾ. ಸಿ.ಎನ್. ಅಶ್ವಥ್ ನಾರಾಯಣ್.

- Advertisement -G L Acharya panikkar
- Advertisement -

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ನಂತರ ಈಗಿನ ಹತ್ತು ವರ್ಷಗಳ ಅವಧಿಯ ಪ್ರಾಥಮಿಕ ಶಿಕ್ಷಣವು 15 ವರ್ಷಗಳ ಅವಧಿಗೆ ಹೆಚ್ಚಾಗಲಿದೆ ಎಂದು ಉಪ ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.ರಾಜ್ಯ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ಅಶ್ವತ್ಥನಾರಾಯಣ ಹೇಳಿದರು.

ಬೆಂಗಳೂರಿನ ಸದಾಶಿವಗರದಲ್ಲಿ ಭಾನುವಾರ ಕಲಬುರಗಿಯ ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ನೂತನ ಶಾಲಾ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಈವರೆಗೆ ಸರ್ಕಾರಿ ಶಾಲೆಗಳಲ್ಲಿ ಮಗುವಿನ ಆರನೇ ವರ್ಷದಿಂದ ಪ್ರಾಥಮಿಕ ಶಿಕ್ಷಣ ಕಲಿಕೆ ಆರಂಭವಾಗುತ್ತಿತ್ತು. ಶಿಕ್ಷಣ ನೀತಿ ಜಾರಿಗೆ ಬಂದ ನಂತರ ಮಗುವಿನ 3ನೇ ವರ್ಷದಿಂದ ಪ್ರಾಥಮಿಕ ಶಿಕ್ಷಣ ಶುರುವಾಗುತ್ತದೆ ಎಂದರು.

ಬಹುತೇಕ ಮುಂದುವರಿದ ದೇಶಗಳಲ್ಲಿ ಮಗುವಿನ 3ನೇ ವರ್ಷದಿಂದಲೇ ಕಲಿಕೆ ಆರಂಭವಾಗುತ್ತಿದೆ. ಅಷ್ಟೇ ಏಕೆ, ನಮ್ಮ ದೇಶದ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲೂ ಇದೇ ವ್ಯವಸ್ಥೆ ಇದೆ. ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವ ಮಕ್ಕಳಿಗೆ ಈ ಸೌಲಭ್ಯ ಸಿಗುತ್ತಿಲ್ಲ. ಗ್ರಾಮೀಣ ವಿದ್ಯಾರ್ಥಿಗಳಿಗೆ ಮತ್ತು ಆರ್ಥಿಕವಾಗಿ ದುರ್ಬಲರಾಗಿರುವ ಮಕ್ಕಳಿಗೆ ಇದರಿಂದ ಅನ್ಯಾಯವಾಗುತ್ತಿದೆ. ಅದೆಲ್ಲವನ್ನೂ ವೈಜ್ಞಾನಿಕವಾಗಿ ಸರಿ ಮಾಡುವ ನಿಟ್ಟಿನಲ್ಲಿ ಸರ್ವ ಸಮಾನವಾಗಿ ಮಗುವಿನ 3ನೇ ವಯಸ್ಸಿನಿಂದಲೇ ಪ್ರಾಥಮಿಕ ಶಿಕ್ಷಣವನ್ನು ಸರ್ಕಾರ ನೀಡಲಿದೆ ಎಂದು ಹೇಳಿದರು.

- Advertisement -

Related news

error: Content is protected !!