Monday, June 22, 2026
spot_imgspot_img
spot_imgspot_img

ಸ್ನೇಹಿತರ ಜೊತೆ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು..!

- Advertisement -
- Advertisement -

ರಜೆ ಕಳೆಯಲು ಸ್ನೇಹಿತರ ಜೊತೆ ಬಂದು ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲಾದ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಬಳಿ ಇರುವ ಹುಲ್ಲಹಳ್ಳಿ ಅಣೆಕಟ್ಟೆಯಲ್ಲಿ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿ ನಂಜನಗೂಡಿನ ಎಂಐಟಿ ಕಾಲೇಜು ವಿಧ್ಯಾರ್ಥಿ ಅಭಿಷೇಕ್(23) ಎಂದು ಗುರುತಿಸಲಾಗಿದೆ.

ಕಾಲೇಜು ರಜೆ ಇದ್ದ ಕಾರಣ ಅಭಿಷೇಕ್ ತನ್ನ ಸ್ನೇಹಿತರಾದ ಸಮರ್ಥ್ ಹಾಗೂ ಪ್ರೀತಂ ಜೊತೆ ಹುಲ್ಲಹಳ್ಳಿಯ ಸಮೀಪವಿರುವ ಅಣೆ ಕಟ್ಟೆಯಲ್ಲಿ ಈಜಲು ತೆರಳಿದ್ದಾನೆ. ಸ್ನೇಹಿತರ ಜೊತೆಗೆ ನೀರಿಗೆ ಧುಮುಕಿ ಈಜುತ್ತಾ ಮುಂದೆ ಸಾಗಿದ ಅಭಿಷೇಕ್ ಹಿಂದಕ್ಕೆ ಬರಲು ಸಾಧ್ಯವಾಗದೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಹುಲ್ಲಹಳ್ಳಿ ಪೊಲೀಸರ ನೆರವಿನಿಂದ ಅಭಿಷೇಕ್ ಮೃತದೇಹ ಹೊರತೆಗೆಯಲಾಗಿದೆ.ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!