Friday, July 24, 2026
spot_imgspot_img
spot_imgspot_img

ನೆಲಮಂಗಲ: ಯುಗಾದಿ ಹಬ್ಬದ ದಿನವೇ ನಿಗೂಢ ಸ್ಫೋಟ – ಮೂವರಿಗೆ ಗಂಭೀರ ಗಾಯ

- Advertisement -
- Advertisement -

ನೆಲಮಂಗಲ: ತಾಲೂಕಿನ ಚಂದನ ಹೊಸಹಳ್ಳಿ ಗ್ರಾಮದ ಮನೆಯೊಂದರಲ್ಲಿ ನಿಗೂಢ ಸ್ಫೋಟ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಮೂವರು ಗಂಭೀರ ಗಾಯಗೊಂಡಿದ್ದಾರೆ.

ತುಮಕೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ಚಂದನ ಹೊಸಹಳ್ಳಿ ಗ್ರಾಮದ ಬಳಿ ಇರುವ ಬಿಲ್ಡಿಂಗ್‌ನ ನಾಲ್ಕನೇ ಮಹಡಿಯಲ್ಲಿ ಸ್ಫೋಟ ಸಂಭವಿಸಿದ್ದು, ಸ್ಫೋಟದಲ್ಲಿ ಅಭಿನಂದನ್ ಶರ್ಮಾ, ಅಭಿಷೇಕ್ ಶರ್ಮಾ ಹಾಗೂ ರಾಮ್ ಭಚನ್ ಶರ್ಮಾ ಗಂಭೀರವಾಗಿ ಗಾಯಗೊಂಡರಾಗಿದ್ದಾರೆ. ಈ ಮೂವರು ಉತ್ತರ ಪ್ರದೇಶ ಮೂಲದ ಕಾರ್ಮಿಕರು ಎಂದು ತಿಳಿದು ಬಂದಿದೆ. ಮೂವರು ಸೋಂಪುರ ಕೈಗಾರಿಕಾ ಪ್ರದೇಶದ ಮಾರುತಿ ಸುಜುಕಿ ಕಂಪನಿಯಲ್ಲಿ ಸೆಕ್ಯೂರಿಟಿಯಾಗಿ ಕೆಲಸ ನಿರ್ವಹಿಸುತ್ತಿದ್ದರು.

ಅಡುಗೆ ಅನಿಲ ಸೋರಿಕೆಯಾಗಿ ಸ್ಫೋಟ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಡಾಬಸ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!