- Advertisement -
- Advertisement -



ನೆಲಮಂಗಲ: ಭೀಕರ ಅಗ್ನಿ ಅವಘಡದಲ್ಲಿ 40 ಪ್ರಯಾಣಿಕರಿದ್ದ ಖಾಸಗಿ ಬಸ್‌ವೊಂದು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲಮಂಗಲ ಸಮೀಪ ಇಂದು ಮುಂಜಾನೆ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಬೆಂಗಳೂರಿನಿಂದ ಕಲಬುರಗಿಗೆ ತೆರಳುತ್ತಿದ್ದ ಸಂಜನಾ ಟ್ರಾವೆಲ್ಸ್‌ಗೆ ಸೇರಿದ ಖಾಸಗಿ ಬಸ್ ಎನ್ನಲಾಗಿದೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಬಸ್ ಲಗೇಜ್ ಬಾಕ್ಸ್‌ನಲ್ಲಿ ಇಟ್ಟಿದ್ದ ವಸ್ತುಗಳೆಲ್ಲ ಸುಟ್ಟು ಭಸ್ಮ ಆಗಿವೆ. ಬೆಂಕಿ ದೊಡ್ಡ ಗಾತ್ರದಲ್ಲಿ ವ್ಯಾಪಿಸಿದ ಹಿನ್ನೆಲೆ ಬೆಲೆ ಬಾಳುವ ವಸ್ತುಗಳೆಲ್ಲ ಹೊತ್ತಿ ಉರಿದಿದೆ ಎನ್ನಲಾಗಿದೆ.
ನೆಲಮಂಗಲ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.
- Advertisement -








