- Advertisement -
- Advertisement -





ನೆಲಮಂಗಲ: ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನೆಲಮಂಗಲದ ಡಾಬಸ್ ಪೇಟೆಯ ಅಂಚೆಮನೆ ಗೇಟ್ ಬಳಿ ನಡೆದಿದೆ.
ಬೈಕ್, ಎರಡು ಕಾರು, ಲಾರಿ, ಬಸ್, ಪಿಕಪ್ ವಾಹನ ಅಪಘಾತಕ್ಕೀಡಾಗಿದ್ದು, ಡಿಕ್ಕಿಯ ರಭಸಕ್ಕೆ ಹೆದ್ದಾರಿಯಲ್ಲಿ ಪಿಕ್‌ಅಪ್ ವಾಹನ ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಗಾಯಗೊಂಡ 10ಕ್ಕೂ ಹೆಚ್ಚು ಜನರನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಾಯಾಳುಗಳ ಪೈಕಿ ಇಬ್ಬರು ಗಂಭೀರ ಸ್ಥಿತಿಯಲ್ಲಿ ಇದ್ದಾರೆ ಎಂದು ತಿಳಿದು ಬಂದಿದೆ.
ಈ ಸರಣಿ ಅಪಘಾತದ ಪರಿಣಾಮ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿ, ಸಾರಿಗೆ ಸಂಪರ್ಕದಲ್ಲಿ ವ್ಯತ್ಯಯ ಕಂಡುಬಂದಿತ್ತು ಎನ್ನಲಾಗಿದೆ. ಬಳಿಕ ಸ್ಥಳಕ್ಕೆ ಧಾವಿಸಿದ ನೆಲಮಂಗಲ ಸಂಚಾರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ ಎಂಬುದಾಗಿ ವರದಿ ಮೂಲಕ ತಿಳಿದುಬಂದಿದೆ.
- Advertisement -








