Sunday, June 28, 2026
spot_imgspot_img
spot_imgspot_img

ತಿಂಗಳ ಹಿಂದಷ್ಟೇ ಪ್ರಿಯಕರನೊಂದಿಗೆ ಮದುವೆಯಾದ ಮಹಿಳಾ ಪೇದೆ ಆತ್ಮಹತ್ಯೆಗೆ ಶರಣು!

- Advertisement -
- Advertisement -

ನೆಲಮಂಗಲ: ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಹಿಳಾ ಪೊಲೀಸ್​ ಪೇದೆಯೊಬ್ಬರು ಗಂಡನ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರು ಉತ್ತರ ತಾಲೂಕು ಚಿಕ್ಕಗೊಲ್ಲರಹಟ್ಟಿಯಲ್ಲಿ ನಡೆದಿದೆ.

ಮೃತಪಟ್ಟ ಮಹಿಳೆ ತುಮಕೂರಿನ ನಾಯಕನಪಾಳ್ಯ ಮೂಲದ ನೇತ್ರಾ(27) ಎನ್ನಲಾಗಿದೆ.

ನೇತ್ರಾ ಅವರು ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿದ್ದರು. ಪೀಣ್ಯಾ ಸಂಚಾರಿ ಪೊಲೀಸ್ ಠಾಣೆ ಪೇದೆ ಮಂಜುನಾಥ್ ಜೊತೆ ನೇತ್ರಾಗೆ ಕಳೆದ ತಿಂಗಳು ಮದುವೆ ಆಗಿತ್ತು. ಇವರಿಬ್ಬರೂ ಪರಸ್ಪರ ಪ್ರೀತಿಸಿ ಮನೆಯವರ ಒಪ್ಪಿಗೆ ಪಡೆದು ಮದುವೆಯಾಗಿದ್ದರು.

ಅಡುಗೆ ವಿಚಾರಕ್ಕೆ ಗಂಡನ ಮೇಲೆ ಬೇಸರಗೊಂಡ ನೇತ್ರಾ ಆತ್ಮಹತ್ಯೆ ಶರಣಾಗಿದ್ದಾರೆ ಎನ್ನಲಾಗಿದೆ. ಆದರೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಈ ಘಟನೆಗೆ ಸಂಬಂಧಿಸಿ ಪತಿ ಮಂಜುನಾಥ್​ನನ್ನು ಮಾದನಾಯಕನಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

- Advertisement -

Related news

error: Content is protected !!