Wednesday, June 24, 2026
spot_imgspot_img
spot_imgspot_img

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

- Advertisement -
- Advertisement -

ನೆಲ್ಯಾಡಿ(ನ10): ಚಿಕ್ಕಬಳ್ಳಾಪುರದಿಂದ ಹೊರಟು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಹೊಂಡಕ್ಕೆ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಎಂಜಿರ ಸಮೀಪದ ಲಾವತ್ತಡ್ಕ ಎಂಬಲ್ಲಿ ನಡೆದಿದೆ.

ಬೆಳಿಗ್ಗೆ 4 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದ್ದು, ಚಾಲಕ ನಿದ್ದೆ ಮಂಪರಿನಲ್ಲಿ ಚಲಿಸುತ್ತಿದ್ದದ್ದೇ ಈ ದುರ್ಘಟನೆಗೆ ಕಾರಣ ಎನ್ನಲಾಗಿದೆ. ಕಾರಿನಲ್ಲಿ ಡ್ರೈವರ್ ಸೇರಿ ಒಟ್ಟು ಐದು ಮಂದಿ ಪ್ರಯಾಣಿಸುತ್ತಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಯಾರಿಗೂ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ.

ಅಪಘಾತದ ನಂತರ ಕಾರಿನಲ್ಲಿದ್ದ ಪ್ರಯಾಣಿಕರು ತಮ್ಮ ಯಾತ್ರೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ, ಕಾರಿನೊಂದಿಗೆ ವಾಪಾಸ್ ಚಿಕ್ಕಬಳ್ಳಾಪುರಕ್ಕೆ ತೆರಳಿದ್ದಾರೆ ಎಂದು ವರದಿಯಾಗಿದೆ.

- Advertisement -

Related news

error: Content is protected !!