Sunday, June 7, 2026
spot_imgspot_img
spot_imgspot_img

ನೆಲ್ಯಾಡಿ: ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರಿಗೆ ಗಾಯ

- Advertisement -
- Advertisement -

ನೆಲ್ಯಾಡಿ: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಬಸ್ ಹಾಗೂ ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್ ಅಡ್ಡಹೊಳೆ ಪೆಟ್ರೋಲ್ ಬಂಕ್ ಬಳಿ ಮುಖಾಮುಖಿ ಡಿಕ್ಕಿ ಹೊಡೆದು ವಾಹನಗಳು ಜಖಂಗೊಂಡ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ.

ಗಾಯಗೊಂಡವರನ್ನು ಹಾಸನ ಮೂಲದ ದಂಪತಿಗಳಾದ ನಾಗೇಂದ್ರ ಪ್ರಸಾದ್ (60) ಮತ್ತು ಭಾರತಿ (54) ಎಂದು ಗುರುತಿಸಲಾಗಿದೆ.

ಗಾಯಾಳುಗಳನ್ನು ಶಿರಾಡಿಯ ಆಂಬ್ಯುಲೆನ್ಸ್ ಮೂಲಕ ಸಕಲೇಶಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಚಾಲಕನ ಅತಿವೇಗ ಹಾಗೂ ಅಜಾಗರೂಕತೆ ಮುಖ್ಯ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಈ ಕುರಿತು ನೆಲ್ಯಾಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!