Monday, May 6, 2024
spot_imgspot_img
spot_imgspot_img

ನೆಲ್ಯಾಡಿ: ಬೈಕ್ ಲಾರಿ ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು..!

- Advertisement -G L Acharya panikkar
- Advertisement -

ನೆಲ್ಯಾಡಿ: ನಿಂತಿದ್ದ ಲಾರಿಯೊಂದಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಕೋಲ್ಪೆ ಎಂಬಲ್ಲಿ ನಡೆದಿದೆ.

ಮೃತ ಯುವಕಬಂಟ್ವಾಳ ತಾಲೂಕು ಕರೋಪಾಡಿ ನಿವಾಸಿ ದೀಕ್ಷಿತ್ (23) ಎಂದು ಗುರುತಿಸಲಾಗಿದೆ.

ಬೈಕ್ ಸವಾರ ಉಪ್ಪಿನಂಗಡಿ ಕಡೆಯಿಂದ ನೆಲ್ಯಾಡಿ ಕಡೆಗೆ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಕೋಲ್ಪೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿ ಲಾರಿ ನಿಲ್ಲಿಸಿ ಲಾರಿ ಚಾಲಕ ಹೋಟೆಲ್ ವೊಂದಕ್ಕೆ ಊಟಕ್ಕೆಂದು ತೆರಳಿದ್ದ ವೇಳೆ ನಿಯಂತ್ರಣ ತಪ್ಪಿ ಬೈಕ್ ಸವಾರ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ತಕ್ಷಣ ಆಂಬುಲೆನ್ಸ್ ನಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.

- Advertisement -

Related news

error: Content is protected !!