Wednesday, June 24, 2026
spot_imgspot_img
spot_imgspot_img

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿ; ಹಲವರಿಗೆ ಗಾಯ

- Advertisement -
- Advertisement -

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಬೆಳಗಿನ ಜಾವ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನಲ್ಲಿ ನಡೆದಿದೆ.

ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಶಿರಾಡಿ ಘಾಟ್ ನಲ್ಲಿ ರಸ್ತೆ ಬದಿ ಪಲ್ಟಿಯಾಗಿ ಕಾಂಕ್ರೀಟ್ ತಡೆಗೋಡೆಗೆ ವಾಲಿ ನಿಂತಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -

Related news

error: Content is protected !!