Thursday, October 22, 2026
spot_imgspot_img
spot_imgspot_img

ನೆಲ್ಯಾಡಿ: ಭೀಕರ ರಸ್ತೆ ಅಪಘಾತ: ಪುತ್ತೂರು ಕಾಲೇಜು ವಿದ್ಯಾರ್ಥಿ ದುರ್ಮರಣ

- Advertisement -
- Advertisement -

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಕರ್ಬಸಂಕದ ಬಳಿ ಗುರುವಾರ(ಅ.22) ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪುತ್ತೂರು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಮೃತಪಟ್ಟಿದ್ದಾರೆ.

ಮೃತರನ್ನು ನೆಲ್ಯಾಡಿಯಲ್ಲಿ ಪ್ಲವರ್ಸ್ ಹೋಟೆಲ್ ನಡೆಸುತ್ತಿರುವ ಜೋಜೋ ಟಿ. ಜೋರ್ಜ್ ಅವರ ಪುತ್ರ ಅಶ್ವಿನ್ ಜೋಜೋ ಜೋರ್ಜ್(16) ಎಂದು ಗುರುತಿಸಲಾಗಿದೆ.

ಗುರುವಾರ ಮುಂಜಾನೆ ನೆಲ್ಯಾಡಿ ಕರ್ಬಸಂಕದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಲಾಗಿದ್ದ ಗ್ಯಾಸ್‌ ಟ್ಯಾಂಕರ್‌ಗೆ ಕಾರು ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಅಶ್ವಿನ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಿಂದ ತಿಳಿದುಬಂದಿದೆ.

ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

- Advertisement -

Related news

error: Content is protected !!