Tuesday, June 23, 2026
spot_imgspot_img
spot_imgspot_img

ನೆಲ್ಯಾಡಿ: ಕೆಎಸ್‌‌ಆರ್‌ಟಿಸಿ ಬಸ್- ಲಾರಿ ನಡುವೆ ಡಿಕ್ಕಿ; ಶಾಲಾ ಮಕ್ಕಳು ಸಹಿತ ಹಲವರಿಗೆ ಗಾಯ..!

- Advertisement -
- Advertisement -

ನೆಲ್ಯಾಡಿ :ಕೆಎಸ್‌‌ಆರ್‌ಟಿಸಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಹೊಡೆದ ಪರಿಣಾಮ ಶಾಲಾ ಮಕ್ಕಳು ಸಹಿತ 10 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.

ಸುಬ್ರಹ್ಮಣ್ಯದಿಂದ ಮಂಗಳೂರಿಗೆ ಹೋಗುತ್ತಿದ್ದ ಬಸ್ ಉಪ್ಪಿನಂಗಡಿಯಲ್ಲಿ ಬಸ್ ನಿಲ್ದಾಣಕ್ಕೆ ಹೋಗಲು ರಾಷ್ಟ್ರೀಯ ಹೆದ್ದಾರಿಯಿಂದ ಅಂಡರ್ ಪಾಸ್ ನಿಂದ ಮುಂದೆ ಹೋಗುತ್ತಿದ್ದಂತೆ ಮಂಗಳೂರು ಕಡೆಯಿಂದ ಬರುತ್ತಿದ್ದ ಲಾರಿ ಬಸ್‌ನ ಹಿಂಬದಿಗೆ ಡಿಕ್ಕಿಯಾಗಿದೆ.

ಘಟನೆಯಲ್ಲಿ ಶಾಲಾ ಮಕ್ಕಳ ಸಹಿತ ಬಸ್‌ನ ಹಿಂಬದಿ ಸೀಟು ಹಾಗೂ ಬಾಗಿಲಲ್ಲಿ ನಿಂತುಕೊಂಡಿದ್ದ ಹಲವರು ಗಾಯಗೊಂಡಿದ್ದಾರೆ. ಈ ಪೈಕಿ ಕೆಲವರು ಉಪ್ಪಿನಂಗಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಗಂಭೀರ ಗಾಯಗೊಂಡವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.

- Advertisement -

Related news

error: Content is protected !!