Monday, July 20, 2026
spot_imgspot_img
spot_imgspot_img

ನೆಲ್ಯಾಡಿ: ಅಡ್ಡಹೊಳೆಯಲ್ಲಿ ಮಹಿಳೆಗೆ ಪಿಕಪ್ ಡಿಕ್ಕಿ – ಮೃತ್ಯು

- Advertisement -
- Advertisement -

ನೆಲ್ಯಾಡಿ: ಹೆದ್ದಾರಿ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರು ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ ಘಟನೆ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಅಡ್ಡಹೊಳೆ ಪ್ರದೇಶದಲ್ಲಿ ಜ.8ರಂದು ಸಂಜೆ ನಡೆದಿದೆ.ಶಿರಾಡಿ ಗ್ರಾಮದ ಅಡ್ಡಹೊಳೆ ಅಂಬೇಡ್ಕರ್ ಕಾಲೋನಿ ನಿವಾಸಿ ದಿ. ಬಾಬು ಅವರ ಪತ್ನಿ ಲೀಲಾ (59) ಮೃತಪಟ್ಟವರಾಗಿದ್ದಾರೆ. ಇವರು ಕೂಲಿ ಕೆಲಸ ಮುಗಿಸಿ ರಾಷ್ಟ್ರೀಯ ಹೆದ್ದಾರಿ ಬದಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಮಂಗಳೂರಿನಿಂದ ಬೆಂಗಳೂರಿನ ಕಡೆಗೆ ಸಾಗುತ್ತಿದ್ದ ಹಾಸನ ನಿವಾಸಿ ರಮೇಶ್ ಎಂಬವರು ಚಾಲನೆ ಮಾಡುತ್ತಿದ್ದ ಪಿಕಪ್ ವಾಹನ (ಕೆಎ 12, ಜೆಜೆ 0389) ಡಿಕ್ಕಿ ಹೊಡೆದಿದೆ.

ಡಿಕ್ಕಿಯ ಪರಿಣಾಮ ಲೀಲಾ ಅವರು ರಸ್ತೆ ಮೇಲೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ತಕ್ಷಣ ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.ನೆಲ್ಯಾಡಿ ಹೊರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರು ಇಬ್ಬರು ಪುತ್ರರನ್ನು ಅಗಲಿದ್ದಾರೆ.

- Advertisement -

Related news

error: Content is protected !!