Wednesday, June 10, 2026
spot_imgspot_img
spot_imgspot_img

ಭಾರತದ ಮಾವಿನಹಣ್ಣಿಗೆ ನಿರ್ಬಂಧ ಹೇರಿದ ನೇಪಾಳ..!

- Advertisement -
- Advertisement -

ಕಠ್ಮಂಡು : ಭಾರತದಿಂದ ಆಮದು ಮಾಡಿಕೊಳ್ಳುವ ಮಾವಿನ ಹಣ್ಣಿನ ಮೇಲೆ ನೇಪಾಳ ತಾತ್ಕಾಲಿಕ ನಿರ್ಬಂಧ ಹೇರಿದ್ದು, ಮಾವಿನ ಹಣ್ಣಿನಲ್ಲಿ ಸುರಕ್ಷತಾ ಮಿತಿಗಿಂತ ಹೆಚ್ಚಿನ ಪ್ರಮಾಣದ ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ನೇಪಾಳದ ಕ್ವಾರಂಟೈನ್ ಅಧಿಕಾರಿಗಳು ನಡೆಸಿದ ಪರೀಕ್ಷೆಯಲ್ಲಿ ಕೆಲವು ಮಾವಿನ ಹಣ್ಣಿನ ಸಾಗಣೆಗಳಲ್ಲಿ ನಿಗದಿತ ಮಿತಿಗಿಂತ ಹೆಚ್ಚಿನ ಕೀಟನಾಶಕ ಅಂಶಗಳು ಕಂಡುಬಂದಿವೆ . ಗ್ರಾಹಕರ ಆರೋಗ್ಯ ರಕ್ಷಣೆ ಮತ್ತು ಆಹಾರ ಸುರಕ್ಷತಾ ನಿಯಮಗಳ ಪಾಲನೆಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ನೇಪಾಳ ಸರ್ಕಾರ ತಿಳಿಸಿದೆ.

ಈ ಕ್ರಮವು ಕೇವಲ ಆಹಾರ ಸುರಕ್ಷತಾ ನಿಯಮಗಳಿಗೆ ಸಂಬಂಧಿಸಿದ್ದು, ಭಾರತ-ನೇಪಾಳ ದ್ವಿಪಕ್ಷೀಯ ಸಂಬಂಧಗಳ ಮೇಲೆ ಯಾವುದೇ ಪರಿಣಾಮ ಬೀರುವ ಉದ್ದೇಶ ಇಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಇದಕ್ಕೂ ಮೊದಲು ಜಪಾನ್ ಕೂಡ ಭಾರತೀಯ ಮಾವಿನ ಹಣ್ಣಿನ ಆಮದನ್ನು ಸ್ಥಗಿತಗೊಳಿಸಿತ್ತು. ಆದರೆ ಜಪಾನ್‌ನ ನಿರ್ಧಾರ ಕೀಟನಾಶಕ ಅಂಶಗಳಿಗೆ ಸಂಬಂಧಿಸಿರಲಿಲ್ಲ. ಜಪಾನ್ ಅಧಿಕಾರಿಗಳು ಭಾರತದಲ್ಲಿನ ಕೆಲವು ಸಂಸ್ಕರಣಾ ಕೇಂದ್ರಗಳಲ್ಲಿ ಕೀಟ ನಿಯಂತ್ರಣ ಕ್ರಮಗಳಲ್ಲಿ ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ ನಿರ್ಬಂಧ ಹೇರಿದ್ದರು ಎಂಬುದಾಗಿ ಮೂಲಗಳಿಂದ ತಿಳಿದುಬಂದಿದೆ.

- Advertisement -

Related news

error: Content is protected !!