Sunday, July 26, 2026
spot_imgspot_img
spot_imgspot_img

ಅ. 24ರಂದು ನೇರಳಕಟ್ಟೆಯಲ್ಲಿ SSF ಮಾಣಿ ಸೆಕ್ಟರ್ ಪ್ರತಿಭೋತ್ಸವ

- Advertisement -
- Advertisement -

ಮಾಣಿ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಇದರ ” ನಿರೀಕ್ಷೆಗಳ ನೀಲ ನಕ್ಷೆ ” ಸ್ಲೋಗನ್ ನೊಂದಿಗೆ ನಡೆಯುವ ಪ್ರತಿಭೋತ್ಸವ ಕಾರ್ಯಕ್ರಮವು ಅಕ್ಟೋಬರ್ 24 ಆದಿತ್ಯವಾರ ನೇರಳಕಟ್ಟೆ ತಾಜುಲ್ ಫುಖಹಾ‌ಅ್ ಬೇಕಲ್ ಉಸ್ತಾದ್ ವೇದಿಕೆಯಲ್ಲಿ ನಡೆಯಲಿದೆ.

ಸಯ್ಯಿದ್ ಸಾಬಿತ್ ಮುಈನೀ ಸಖಾಫಿ ಪಾಟ್ರಕೋಡಿ ಯವರ ಅಧ್ಯಕ್ಷತೆಯಲ್ಲಿ ಹುಸೈನ್ ಮದನಿ ನೇರಳಕಟ್ಟೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಯ್ಯಿದ್ ಹಂಝ ಅಲ್ ಹಾದಿ ತಂಙಳ್ ಪಾಟ್ರಕೋಡಿ ದುಆ ನಡೆಸಿಕೊಡಲಿದ್ದಾರೆ.

ಸಮಾರೋಪ ಸಮಾರಂಭದಲ್ಲಿ ಜಿ ಎಂ ಕಾಮಿಲ್ ಸಖಾಫಿ ಅಧ್ಯಕ್ಷತೆ ವಹಿಸಲಿದ್ದಾರೆ. ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ನೇತೃತ್ವ ನೀಡುವರು,ಮುಹ್ಯಿದ್ದೀನ್ ಕಾಮಿಲ್ ಸಖಾಫಿ ತೋಕೆ ಉದ್ಘಾಟನಾ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಹಲವಾರು ಉಲಮಾ ಉಮರಾ ನಾಯಕರುಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!