Sunday, June 14, 2026
spot_imgspot_img
spot_imgspot_img

ಬಂಟ್ವಾಳ: ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ವಿದ್ಯಾರ್ಥಿ

- Advertisement -
- Advertisement -

ಬಂಟ್ವಾಳ: ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದು ವಿದ್ಯಾರ್ಥಿಯೊಬ್ಬ ನೀರು ಪಾಲಾಗಿದ್ದು, ಬಳಿಕ ಸಾರ್ವಜನಿಕರು ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ ಘಟನೆ ಬರಿಮಾರು ಗ್ರಾಮದ ಕಾಗೆಕಾನ ಎಂಬಲ್ಲಿ ನಡೆದಿದೆ.

ಬರಿಮಾರ್ ಗ್ರಾಮದ ಪಾಪೆತ್ತಿಮಾರು ನಿವಾಸಿ ರಕ್ಷಣ್(16) ನೀರಿಗೆ ಬಿದ್ದಿದ್ದ ವಿದ್ಯಾರ್ಥಿ.

ಸ್ಥಳೀಯ ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದು, ಕಾಲೇಜ್ ಗೆ ರಜೆ ಇದ್ದ ಹಿನ್ನೆಲೆಯಲ್ಲಿ ನೇತ್ರಾವತಿ ನದಿ ಬಳಿಗೆ ಹೋಗಿದ್ದಾಗ ಈ ಘಟನೆ ಸಂಭವಿಸಿದೆ. ಬಳಿಕ ಸ್ಥಳೀಯರು ಮತ್ತು ಅಗ್ನಿಶಾಮಕದಳವರು ವಿದ್ಯಾರ್ಥಿಯನ್ನು ಕಾರ್ಯಾಚರಣೆ ನಡೆಸಿ, ಸೋಷಿಯಲ್ ಇಕ್ವಾ ಮಾಣಿಯ ಆಂಬ್ಯುಲೆನ್ಸ್ ಮೂಲಕ ಸಮೀಪದ ಕಲ್ಲಡ್ಕ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ತುಂಬೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆತನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!