Saturday, April 20, 2024
spot_imgspot_img
spot_imgspot_img

ನೂತನ ಸಿಎಜಿಯಾಗಿ ಗಿರೀಶ್ ಚಂದ್ರ ಮುರ್ಮು ನೇಮಕ

- Advertisement -G L Acharya panikkar
- Advertisement -

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್-ಗವರ್ನರ್ ಹುದ್ದೆಗೆ ಬುಧವಾರ ರಾತ್ರಿ ರಾಜೀನಾಮೆ ನೀಡಿದ ಗಿರೀಶ್ ಚಂದ್ರ ಮುರ್ಮು ಅವರನ್ನು ಭಾರತದ ನೂತನ ಕಂಪ್ಟ್ರೋಲರ್ ಮತ್ತು ಆಡಿಟರ್ ಜನರಲ್ ಆಗಿ ನೇಮಕ ಮಾಡಲಾಗಿದೆ.

ಪ್ರಸ್ತುತ ಸಿಎಜಿಯಾಗಿರುವ ರಾಜೀವ್ ಮೆಹ್ರಿಶಿ ಆಗಸ್ಟ್ 8ಕ್ಕೆ ನಿವೃತ್ತಿಯಾಗಲಿದ್ದಾರೆ. ಸಿಎಜಿ ಒಂದು ಸಾಂವಿಧಾನಿಕ ಹುದ್ದೆಯಾಗಿದ್ದು, ಈ ಸ್ಥಾನ ಖಾಲಿಯಿರುವಂತಿಲ್ಲ. ಹೀಗಾಗಿ ತರಾತುರಿಯಲ್ಲಿ ಗಿರೀಶ್ ಚಂದ್ರ ಮುರ್ಮು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಗಿರೀಶ್ ಚಂದ್ರ ಮುರ್ಮು ಅವರು ಹಿಂದಿನ ಹುದ್ದೆಗೆ ರಾಜೀನಾಮೆ ನೀಡಿರುವುದು ಬುಧವಾರ ಅಚ್ಚರಿ ಮೂಡಿಸಿತ್ತು. ಮುರ್ಮು ಹೊಸ ಕೇಂದ್ರಾಡಳಿತ ಪ್ರದೇಶದ ಜಮ್ಮು ಮತ್ತು ಕಾಶ್ಮೀರದ ಮೊದಲ ಲೆಫ್ಟಿನೆಂಟ್-ಗವರ್ನರ್ ಆಗಿದ್ದರು.

ಅವರ ಸ್ಥಾನದಲ್ಲಿ ಹಿರಿಯ ಬಿಜೆಪಿ ಮುಖಂಡ ಮನೋಜ್ ಸಿನ್ಹಾ ಅವರನ್ನು ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಿದೆ.

60 ವರ್ಷದ ಜಿ.ಸಿ.ಮುರ್ಮು, 1985 ರ ಬ್ಯಾಚ್ ಐಎಎಸ್ ಅಧಿಕಾರಿ. ಗಿರೀಶ್ ಚಂದ್ರ ಮುರ್ಮು ಅವರು, ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅವರ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಹಣಕಾಸು ಸಚಿವಾಲಯದಲ್ಲಿ ಕೂಡ ಕಾರ್ಯದರ್ಶಿಯಾಗಿ ಕರ್ತವ್ಯ ಸಲ್ಲಿಸಿದ್ದಾರೆ.

- Advertisement -

Related news

error: Content is protected !!