Saturday, May 15, 2021
spot_imgspot_img
spot_imgspot_img

6 ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್; ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್!

- Advertisement -
- Advertisement -

ನವದೆಹಲಿ: ದೆಹಲಿಯಲ್ಲಿ 6 ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್ ವಿಧಿಸಿರುವುದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಗಳ ಅವಧಿಯಲ್ಲಿ ಸಂಪೂರ್ಣ ಬಂದ್ ಮಾಡಲಾಗುತ್ತಿದ್ದು, ಅಗತ್ಯ ಸೇವೆಗಳಲ್ಲಿ ವ್ಯತ್ಯಯವಿಲ್ಲ, ವಲಸೆ ಕಾರ್ಮಿಕರು ಯಾವುದೇ ಕಾರಣಕ್ಕೂ ಆತಂಕ ಪಡಬೇಕಾಗಿಲ್ಲ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

ದೆಹಲಿಯಲ್ಲಿ ನಿತ್ಯ 25 ಸಾವಿರಕ್ಕೂ ಹೆಚ್ಚು ಕೊರೊನಾ ಸೋಂಕಿತರು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್‌ಡೌನ್ ವಿಧಿಸಲಾಗಿದೆ. ಮದುವೆಗಳಿಗೆ ಅವಕಾಶ ಮಾಡಿಕೊಡಲಾಗುವುದು ಆದರೆ 50 ಜನರಿಗೆ ಮಾತ್ರ ಅವಕಾಶವಿರುತ್ತದೆ. ಇನ್ನುಳಿದಂತೆ ತುರ್ತು ಸೇವೆಗಳು ಲಭ್ಯವಿರಲಿವೆ.

ದೆಹಲಿಯಲ್ಲಿ ಖಾಸಗಿ ಕಚೇರಿಗಳ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡುವಂತೆ ತಿಳಿಸಲಾಗಿದೆ. ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸಲಿವೆ. ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 25,462 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಹೀಗಾಗಿ ಅನಿವಾರ್ಯ ಕಾರಣಗಳಿಂದ ಲಾಕ್‌ಡೌನ್ ವಿಧಿಸಲಾಗಿದೆ ಎಂದಿದ್ದಾರೆ.

ವಲಸೆ ಕಾರ್ಮಿಕರ ಕುರಿತು ಚರ್ಚೆ ನಡೆಸಲಾಗಿದ್ದು, ಅವರಿಗೆ ಯಾವುದೇ ಕೆಟ್ಟ ಅನುಭವವಾಗದಂತೆ ನೋಡಿಕೊಳ್ಳಲಾಗುತ್ತದೆ. ದೆಹಲಿ ಸರ್ಕಾರ ಈ ಹಿಂದೆ ಘೋಷಿಸಿದ್ದ ವಾರಾಂತ್ಯ ಕರ್ಫ್ಯೂ ಸೋಮವಾರ ಬೆಳಗ್ಗೆ 5 ಗಂಟೆಗೆ ಮುಕ್ತಾಯಗೊಂಡಿದೆ.

ಈ ಆರು ದಿನಗಳಲ್ಲಿ ಹೆಚ್ಚು ಹಾಸಿಗೆಗಳ ವ್ಯವಸ್ಥೆ ಮಾಡಲಾಗುತ್ತದೆ, ಈ ಲಾಕ್‌ಡೌನ್ ಸಂದರ್ಭವನ್ನು ಆಮ್ಲಜನಕ ಶೇಖರಣೆ, ಔಷಧಗಳ ಶೇಖರಣೆಗೆ ಬಳಕೆ ಮಾಡಲಾಗುತ್ತದೆ. ಪ್ರತಿಯೊಬ್ಬರೂ ಲಾಕ್‌ಡೌನ್ ನಿಯಮ ಪಾಲಿಸುವಂತೆ ಕೇಜ್ರಿವಾಲ್ ಮನವಿ ಮಾಡಿದ್ದಾರೆ.

driving
- Advertisement -
- Advertisement -

MOST POPULAR

HOT NEWS

Related news

error: Content is protected !!